Breaking News

ಸಿಲಿಕಾನ್​ ಸಿಟಿಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

Spread the love

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್​ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್​ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್​ನಲ್ಲಿದ್ದ ಒಂದು ‌ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.

ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು‌ ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಲೀಕನಿಗೆ ಸುಳ್ಳು ಹೇಳಿ ಚಿನ್ನ ದೋಚಿದ್ದ ಸೇಲ್ಸ್​ಮ್ಯಾನ್​: ಚಿನ್ನ ಕೊಂಡೊಯ್ಯುತ್ತಿದ್ದ ಬ್ಯಾಗ್​ ಅನ್ನು ಯಾರೋ ಅಪರಿಚಿತರು ಕದ್ದೊಯ್ದರು ಎಂದು ಜ್ಯುವೆಲ್ಲರಿ ಮಾಲೀಕನಿಗೆ ಸುಳ್ಳು ಹೇಳಿ ಒಂದು ಕೆಜಿ ಚಿನ್ನ ದೋಚಿದ್ದ ಸೇಲ್ಸ್​ಮ್ಯಾನ್​ ಅನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ