Breaking News

ಹುಬ್ಬಳ್ಳಿ ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ

Spread the love

ಹುಬ್ಬಳ್ಳಿ: ಇಲ್ಲಿನ ಭುವನೇಶ್ವರಿ ನಗರದ ದಲಿತರ ಕಾಲೋನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪಾದಯಾತ್ರೆ ನಡೆಸಿದರು.

ವಿಶ್ವ ಹಿಂದೂ ಪರಿಷತ್, ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಶ್ರೀಗಳು ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಶ್ರೀಗಳಿಗೆ ಪರಿಚಯಿಸಿದರು. ಕಾಲೋನಿಯ ಭುವನೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀಗಳು ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

ದೇವಸ್ಥಾನದಲ್ಲಿ ಮಾತನಾಡಿದ ಪೇಜಾವರ ಶ್ರೀ, “ನಾವೆಲ್ಲರೂ ಸನಾತನ ಧರ್ಮೀಯರು. ನಮಗೆ ರಾಮ ಆದರ್ಶ ಪುರುಷ. ಶತಮಾನಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಜಗತ್ತೆಲ್ಲ ಸುಖವಾಗಿದೆ ಎಂದರೆ ಇದಕ್ಕೆ ಕಾರಣ ರಾಮ. ರಾವಣ ಕೆಟ್ಟ ಗುಣಗಳ ಸಂಕೇತ. ಸುಖ, ಸಂತೋಷಕ್ಕೆ ರಾಮನ ಆರಾಧನೆ ಮಾಡೋಣ” ಎಂದರು.

“ಇನ್ನೊಬ್ಬರನ್ನು ಬಡಿಯುತ್ತೇವೆ, ಕಡಿಯುತ್ತೇವೆ ಎನ್ನುವುದು ರಾವಣನ ಗುಣ. ಮಕರ ಸಂಕ್ರಮಣದ ನಂತರ ರಾಮಮಂದಿರ ಉದ್ಘಾಟನೆ ಆಗಲಿದೆ. ಪ್ರತಿಯೊಬ್ಬರೂ ಐದು ದೀಪಗಳನ್ನು ಬೆಳಗೋಣ” ಎಂದು ಮನವಿ ಮಾಡಿದರು.

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ: ಮುಂದಿನಜನವರಿ ತಿಂಗಳಾಂತ್ಯದ ಮಕರ ಸಂಕ್ರಮಣ ಕಳೆದ ವಾರದೊಳಗೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಮಂದಿರ ನಿರ್ಮಾಣ ಸಮಿತಿಯ ಸದಸ್ಯ ಹಾಗೂ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (ಜೂನ್ -26-2023) ತಿಳಿಸಿದ್ದರು. ಮಂಗಳೂರಿನಲ್ಲಿ ಮಾತನಾಡಿದ್ದ ಅವರು, ಶ್ರೀರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ, ಉದ್ಘಾಟನೆಯ ದಿನ ಶೀಘ್ರದಲ್ಲೇ ನಿಗದಿಯಾಗಲಿದೆ ಎಂದು ತಿಳಿಸಿದ್ದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ