Breaking News

ಜ್ಯುವೆಲ್ಲರಿ ಶಾಪ್ ದರೋಡೆ ಪ್ರಕರಣ: ಹೈದರಾಬಾದ್​ನತ್ತ ಹೊರಟಿದ್ದ ಆರೋಪಿ ಸೆರೆ

Spread the love

ಬೆಂಗಳೂರು : ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದ ಪ್ರಕರಣದಲ್ಲಿ ಇದೀಗ ಒಬ್ಬ ಆರೋಪಿಯನ್ನು ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಹೈದರಾಬಾದ್​ಗೆ ವಿಮಾನ ಹತ್ತುವ ಯತ್ನದಲ್ಲಿದ್ದ ಹುಸೇನ್​ ಎಂಬಾತನನ್ನು ಅರೆಸ್ಟ್​ ಮಾಡಲಾಗಿದ್ದು, ಆತನ ಬಳಿ ಸ್ವಲ್ಪ ಪ್ರಮಾಣದ ಚಿನ್ನಾಭರಣ ದೊರೆಕಿದೆ. ಇನ್ನುಳಿದ ಆರೋಪಿಗಳಾದ ಸಿಕಂದರ್, ಶಿವ ಹಾಗೂ ವಿಕಾಸ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ‌.

ಸಣ್ಣಪುಟ್ಟ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಶಿವನಿಗೆ ಜೈಲಿನಲ್ಲಿ ಹೈದರಾಬಾದ್ ಮೂಲದ ಹುಸೇನ್​, ಸಿಕಂದರ್ ಹಾಗೂ ವಿಕಾಸ್​ನ ಪರಿಚಯವಾಗಿತ್ತು. ಒಟ್ಟಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು, ಗುರುವಾರ ಬೆಳಗ್ಗೆ ಎರಡು ದ್ವಿಚಕ್ರ ವಾಹನಗಳಲ್ಲಿ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯುವೆಲ್ಲರ್ಸ್ ಅಂಗಡಿಗೆ ಬಂದಿದ್ದರು. ನಂತರ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಠಾಣಾ ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡು, ಹೈದರಾಬಾದಿನತ್ತ ಹೊರಟಿದ್ದ ಹುಸೇನ್​ ಎಂಬಾತನನ್ನು ಬಂಧಿಸಿದ್ದಾರೆ. ಉಳಿದ ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ