Breaking News

ಪಂಚ ರಾಜ್ಯ ಚುನಾವಣೆಗೆ ರಾಜ್ಯದ ಹಣ ಬಳಕೆ ಆರೋಪ ಸುಳ್ಳು: ಅವರು ನೋಡಿದ್ದಾರಾ ಸಿಎಂ ಪ್ರಶ್ನೆ

Spread the love

ಬೆಂಗಳೂರು: ರಾಜ್ಯದ ಹಣ ಪಂಚರಾಜ್ಯಗಳ ಚುನಾವಣೆಗೆ ಬಳಕೆ ಮಾಡುತ್ತಾರೆ ಎಂಬ ಮಾಜಿ ಸಚಿವ ಮುನಿರತ್ನ ಅವರ ಆರೋಪ ಸುಳ್ಳು, ಅದನ್ನು ಅವರು ನೋಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುನಿರತ್ನ ಅವರು ಮಾಡಿರುವ ಈ ಆರೋಪದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನೀನು ನೋಡಿದ್ದೀಯಾ? ಅವರು ನೋಡಿದ್ದಾರಾ?. ಆರೋಪ ಮಾಡೋಕೆ ಏನು?. ಎಲ್ಲಾ ಆರೋಪಗಳು ಸುಳ್ಳುಗಳಿಂದ ಕೂಡಿವೆ. ಬಿಜೆಪಿ ಶಾಸಕರ ಆರೋಪಗಳು ನಿಜವಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಿನ್ನೆಯಿಂದ ಬೆಂಗಳೂರಿನ ಹಲವೆಡೆ ಐಟಿ ದಾಳಿಗಳು ನಡೆದಿವೆ. ಈ ದಾಳಿ ವೇಳೆ ಮಾಜಿ ಕಾರ್ಪೊರೇಟರ್​ ಒಬ್ಬರ ಸಂಬಂಧಿಕನ ಮನೆಯಲ್ಲಿ ಸುಮಾರು 42 ಕೋಟಿ ರೂ ನಗದು ಸಿಕ್ಕಿದೆ. ಈ ವಿಚಾರ ಈಗ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವಣ ವಾಗ್ವಾದಕ್ಕೆ ಕಾರಣವಾಗಿದೆ.

ವಿದ್ಯುತ್ ಬೇರೆಡೆ ಮಾರದಂತೆ ಆದೇಶ: ಮಳೆ ಕಡಿಮೆಯಾಗಿದ್ದು ಮಾತ್ರವಲ್ಲದೆ ರಾಜ್ಯದಲ್ಲಿ ಹಾಗೂ ಬೇಸಿಗೆ ರೀತಿಯ ವಾತಾವರಣ ಇದೆ. ಇದರಿಂದಾಗಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆಗಾ ವ್ಯಾಟ್ ವಿದ್ಯುತ್​ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆಗಾ ವ್ಯಾಟ್ ವಿದ್ಯುತ್​​ಗೆ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ಅನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂಬ ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆ ಎಲ್ಲಿಯೂ ಮಾರಬಾರರು ಎಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ: ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಹೇಳಿದ್ದಕ್ಕೆಲ್ಲ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಬಗ್ಗೆ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೇ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್​ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ