Breaking News

ಭಾರತ – ಪಾಕಿಸ್ತಾ‌ನ ಪಂದ್ಯ: ಭಾರತದ ಗೆಲುವಿಗೆ ಕ್ರಿಕೆಟ್​ ಅಭಿಮಾನಿಗಳಿಂದ ವಿಶೇಷ ಪೂಜೆ

Spread the love

ಬೆಳಗಾವಿ : ಭಾರತ ಮತ್ತು ಪಾಕಿಸ್ತಾನ ನಡುವಣ ವಿಶ್ವಕಪ್​ ಪಂದ್ಯದಲ್ಲಿ ಭಾರತ ತಂಡವು ದಿಗ್ವಿಜಯ ಸಾಧಿಸಲಿ ಎಂದು ಬೆಳಗಾವಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಗರದ ರಾಣಿ ಚನ್ನಮ್ಮ ವೃತ್ತದ ಬಳಿ ಇರುವ ಗಣಪತಿ ಮಂದಿರದಲ್ಲಿ ಕ್ರಿಕೆಟ್​ ಪ್ರೇಮಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕಳೆದ 31 ವರ್ಷಗಳಲ್ಲಿ ನಡೆದ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ- ಪಾಕಿಸ್ತಾನ ಏಳು ಬಾರಿ ಮುಖಾಮುಖಿಯಾಗಿದೆ. ಏಳು ಪಂದ್ಯಗಳಲ್ಲೂ ಭಾರತವೇ ಗೆಲುವು ಸಾಧಿಸಿದೆ. ಹಾಗಾಗಿ, 8ನೇ ಬಾರಿಯೂ ಭಾರತ ತಂಡ ಗೆಲ್ಲಲಿ ಎಂದು ಬೇಡಿಕೊಂಡರು.

ಈ ವೇಳೆ ಮಾತನಾಡಿದ ಕ್ರೀಡಾ ಅಭಿಮಾನಿ ಮಹಾಂತೇಶ ವಕ್ಕುಂದ, 2023ರ ವಿಶ್ವಕಪ್ ಟೂರ್ನಿಯ ರೋಚಕ ಪಂದ್ಯ ಇದಾಗಿದೆ. ಗುಜರಾತ್​ನ ನರೇಂದ್ರ ಮೋದಿ ಕ್ರೀಡಾಂಗಣ ಭಾರತ ಮತ್ತು ಪಾಕಿಸ್ತಾನ ನಡುವಿನ ಐತಿಹಾಸಿಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಡೀ ದೇಶವೇ ಪಂದ್ಯ ವೀಕ್ಷಿಸಲು ತುದಿಗಾಲಲ್ಲಿ ನಿಂತಿದೆ. ಈ ಹಿಂದಿನ ವಿಶ್ವಕಪ್​ಗಳಲ್ಲಿ ​ಪಾಕಿಸ್ತಾನ ವಿರುದ್ಧ ಭಾರತ ಸೋತ ಇತಿಹಾಸ ಇಲ್ಲ. ಹಾಗಾಗಿ, ಈ ಬಾರಿಯೂ ಭಾರತ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ. ವಿಶ್ವಕಪ್ ಗೆಲ್ಲುತ್ತದೆ ಇಲ್ಲವೋ ಅದು ಬೇರೆ ವಿಚಾರ ಆದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಾತ್ರ ನಮ್ಮ ಭಾರತ ತಂಡ ಗೆಲ್ಲಬೇಕು ಎಂದು ಎಂದು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಸಂಬಂಧ ಬೆಳಗಾವಿಯಲ್ಲಿ ಅಭಿಮಾನಿಗಳು ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ