ರಾಜು ಬಂಡು ನಾಯ್ಕ್ (ವಯಸ್ಸು 32) ಮತ್ತು ಮಾರುತಿ ನಾಯ್ಕ್ (ವಯಸ್ಸು 32) ಎಂಬುವರ ನಡುವೆ ನಿತ್ಯ ಜಗಳ ನಡೆಯುತ್ತಿತ್ತು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ವಾಗ್ವಾದ ನಡೆಯುತ್ತಿದ್ದಾಗ ರಾಜು ಹರಿತವಾದ ಕುಡುಗೋಲಿನಿಂದ ಮಾರುತಿಯ ಹೊಟ್ಟೆಗೆ ಇರಿದಿದ್ದಾನೆ. ಇದರಿಂದ ಮಾರುತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾರುತಿಯನ್ನು ದ್ವಿಚಕ್ರ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾರುತಿ ನಾಯ್ಕನ ಕುಟುಂಬದವರು ಮಾಹಿತಿ ನೀಡಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೆ ಮಾರುತಿ ನಾಯ್ಕ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದು ಗ್ರಾಮದ ಯುವಕರು ಜಿಲ್ಲಾಸ್ಪತ್ರೆ ಎದುರು ಜಮಾಯಿಸಿದ್ದರು. ಪೊಲೀಸರು ಕೊಲೆಯ ತನಿಖೆ ನಡೆಸುತ್ತಿದ್ದಾರೆ.