Breaking News
Home / Uncategorized / ಕರೆಂಟ್ ಶಾಕ್ ಕೊಟ್ಟ ಸರ್ಕಾರಕ್ಕೆ ಸಿದ್ದರಾಮಯ್ಯ ಕ್ಲಾಸ್..!

ಕರೆಂಟ್ ಶಾಕ್ ಕೊಟ್ಟ ಸರ್ಕಾರಕ್ಕೆ ಸಿದ್ದರಾಮಯ್ಯ ಕ್ಲಾಸ್..!

Spread the love

ಬೆಂಗಳೂರು, ನ.6- ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆಯನ್ನು ಕೈ ಬಿಟ್ಟು ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯ ಯೋಜನೆಗಳನ್ನು ರೂಪಿಸಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ಕೊರೊನಾ ಕಾರಣದಿಂದ ಉತ್ಪಾದನಾ ಚಟುವಟಿಕೆಗಳು ಸ್ಥಗಿತಗೊಂಡಿವೆ.

ಜನರಲ್ಲಿ ಕೊಳ್ಳುವ ಶಕ್ತಿ ಇಲ್ಲ. ಈ ಸಂದರ್ಭದಲ್ಲಿ ಇಂಧನ ಮತ್ತು ವಿದ್ಯುತ್ ದರ ಎರಿಕೆಯಿಂದ ಜನರಿಗೆ ಹೊರೆಯಾಗುತ್ತದೆ. ಪೆಟ್ರೋಲ್, ಡಿಸೇಲ್ ಹಾಗೂ ವಿದ್ಯುತ್ ದರಗಳನ್ನು ಏರಿಕೆ ಮಾಡುವ ಬದಲು ಕಡಿಮೆ ಮಾಡಿ. ಮಾರುಕಟ್ಟೆಯಲ್ಲಿ ಆರ್ಥಿಕ ಚೈತನ್ಯ ಹೆಚ್ಚಿಸಬೇಕು. ಅದರ ಬದಲಾಗಿ ವಿವೇಚನಾ ರಹಿತವಾಗಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಶೇ.25ರಷ್ಟು, ಉಳಿದ ಎಲ್ಲಾ ಎಸ್ಕಾಂಗಳಲ್ಲಿ ಶೇ.17.15ರಷ್ಟು ವಿದ್ಯುತ್ ದರ ಏರಿಕೆಯಾಗಿದೆ. ಸಾರ್ವಜನಿಕರಿಗೆ ಕುಡಿಯುವ ನೀರು ಸಬರಾಜು ಮಾಡುವ ವಿದ್ಯುತ್‍ಗೆ ಗರಿಷ್ಠ 5.20ರಿಂದ 5.45ರೂ.ಗೆ ಹೆಚ್ಚಿಸಲಾಗಿದೆ. ಗೃಹ ಬಳಕೆ ವಿದ್ಯುತ್‍ಗೆ 7.80ರಿಂದ 8.05ಕ್ಕೆ ಏರಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆಗೆ 9ರಿಂದ 9.25ರವರೆಗೆ ಏರಿಕೆಯಾಗಿದೆ.

ಕೈಗಾರಿಕೆಳಿಗೆ 6.90ರಿಂದ 7.20ರವರೆಗೆ ಏರಿಕೆಯಾಗಿದೆ ಎಂದು ವಿವರಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 150ರಿಂದ 200 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಇದೆ . ಇದರಲ್ಲಿ ಶೇ.40ರಿಂದ 50ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದನೆಯಾಗುತ್ತಿದೆ.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗಿಂತಲೂ ಕರ್ನಾಟಕ ಮೂರು ಪಟ್ಟು ನವೀಕೃತ ವಿದ್ಯುತ್ ಉತ್ಪಾದನೆ ಮಾಡುತ್ತಿದೆ. ದೇಶದ ಅನೇಕ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಎನ್‍ಟಿಪಿಸಿ ಘಟಕಗಳು ಕಲ್ಲಿದ್ದಲು ಆಧರಿತ ವಿದ್ಯುತ್ ಉತ್ಪಾದನೆ ಮಾಡುತ್ತಿವೆ. ಈ ಹಿಂದೆ ನಮ್ಮ ಸರ್ಕಾರ ತೆಗೆದುಕೊಂಡ ಕ್ರಮಗಳಿಂದಾಗಿ ವಿದ್ಯುತ್ ಸ್ವಾವಲಂಬನೆ ಮಾಡಲಾಗುತ್ತಿದೆ.

ಈಗಿನ ಪರಿಸ್ಥಿತಿಯಲ್ಲಿ ಬಳಸಿಕೊಂಡು ಉಳಿದ ಹೆಚ್ಚುವರಿ ವಿದ್ಯುತನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುವ ಸಾಮಥ್ರ್ಯ ಹೊಂದಿದೆ. ಕಳೆದ 7-8 ತಿಂಗಳಿನಿಂದ ರಾಯಚೂರಿನ ಥರ್ಮಲ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ರಾಜ್ಯ ಸರ್ಕಾರ ಸಂಪೂರ್ಣ ಸ್ಥಗಿತಗೊಳಿಸಿದೆ.

ಈ ಸಂದರ್ಭದಲ್ಲಿ ಪ್ರತಿ ಯುನಿಟ್‍ಗೆ 50ಪೈಸೆ ಹೆಚ್ಚಿಗೆ ನೀಡಿ ಕೇಂದ್ರದಿಂದ ಕರ್ನಾಟಕ ಸರ್ಕಾರ ವಿದ್ಯುತ್ ಖರೀದಿ ಮಾಡಿದೆ. ಇದರಿಂದಾಗಿ 5ರಿಂದ 6 ಸಾವಿರ ಕೋಟಿ ಜನರ ಹಣ ಬೇಕಾಬಿಟ್ಟಿ ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ. ಬೆಸ್ಕಾಂಗೆ ರಾಜ್ಯ ಸರ್ಕಾರ 3361 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ.

ಕರ್ನಾಟಕದಲ್ಲಿ ಎಲ್ಲಾ ಜಲಾಶಯಗಳು ತುಂಬಿವೆ. ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆ ಯೆತ್ತೆಚ್ಚವಾಗಿ ಉತ್ಪಾದನೆ ಮಾಡಲಾಗುತ್ತಿದೆ. ಇದನ್ನು ಬಳಸಿಕೊಂಡು ಕೇಂದ್ರದಿಂದ ಖರೀದಿ ಮಾಡುವ ವಿದ್ಯುತ್ ನಿಲ್ಲಿಸಿದರೆ 5ರಿಂದ 6ಸಾವಿರ ಕೋಟಿ ರೂ. ಉಳಿಸಬಹುದು.

ಜನರ ಮೇಲಿನ ಹೊರೆಯನ್ನೂ ಕಡಿಮೆ ಮಾಡಬಹುದು. ಆರ್‍ಟಿಪಿಎಸ್ ಸ್ಥಾವರವನ್ನು ಮತ್ತೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗಲಿದ್ದು, ವಿದ್ಯುತ್ ಕೊರತೆಯನ್ನೂ ನೀಗಿಸಬಹುದು ಎಂದಿದ್ದಾರೆ.


Spread the love

About Laxminews 24x7

Check Also

ಮೇ 7ರಂದು ಮತದಾನ: ಮದ್ಯ ಮಾರಾಟ ನಿರ್ಬಂಧ ಮಾಹಿತಿ

Spread the loveಚಿಕ್ಕಮಗಳೂರು, ಮೇ 04: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರ ಮಂಗಳವಾರ ಮತದಾನ ನಡೆಯಲಿದೆ. ಮತದಾನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ