Breaking News

ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರ

Spread the love

ಬೆಳಗಾವಿ : ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರವಾಗಿದೆ.

ಸೇವಾ ಭದ್ರತೆ ಈ ಬಾರಿಯೂ ಸಿಗದಿದ್ದರೆ ನಾವು ಆತ್ಮಹತ್ಯೆಯ ದಾರಿ ತುಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಜ್ಯದ 430ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು ಉಪನ್ಯಾಸಕರು ವಯೋಮಿತಿ ಮೀರಿದ ಮತ್ತು ಮೀರುತ್ತಿರುವವರೂ ಇದ್ದಾರೆ. ಹಾಗಾಗಿ, ಅತಿಥಿ ಉಪನ್ಯಾಸಕರ ಬದುಕು ಸೇವಾಭದ್ರತೆ ಇಲ್ಲದೇ ಅಭದ್ರತೆಯಲ್ಲಿದೆ.

ವೃತ್ತಿಯಲ್ಲಿ ಸಾಕಷ್ಟು ಪ್ರತಿಭಾವಂತ, ಅರ್ಹರು ಮತ್ತು ಬೋಧನಾ ಕೌಶಲ್ಯವುಳ್ಳ ಅಭ್ಯರ್ಥಿಗಳು ಇದ್ದರೂ ಸಹ, ತಮ್ಮ ಸಾಮರ್ಥ್ಯಕ್ಕೆ ತಕ್ಕ ಹಾಗೆ ಶೈಕ್ಷಣಿಕ ಚಟುವಟಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಿದೆ. ಅತ್ಯಂತ ಕಡಿಮೆ ವೇತನ, ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಯಾಗಲ್ಲ. ವರ್ಷಪೂರ್ತಿ ಕೆಲಸ ಸಿಗುತ್ತಿಲ್ಲ. ಇದರಿಂದ ಅತಿಥಿ ಉಪನ್ಯಾಸಕರು ಪ್ರತಿನಿತ್ಯ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಆತಂಕ ಮತ್ತು ಅಭದ್ರತೆಯಲ್ಲೆ ಕಾಲ ದೂಡುವಂತಾಗಿದೆ.


Spread the love

About Laxminews 24x7

Check Also

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

Spread the love ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ