Home / ಜಿಲ್ಲೆ / ಬೆಂಗಳೂರು / ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ.

ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ.

Spread the love

ಬೆಂಗಳೂರು,ನ.6-ನೆರೆಯ ಆಂಧ್ರಪ್ರದೇಶ ಸೇರಿದಂತೆ ಮತ್ತಿತರ ಕಡೆ ಶಿಕ್ಷಕರು ಮತ್ತು ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ. ಈಗಾಗಲೇ ತೀರ್ಮಾನವಾಗಿರುವಂತೆ ಇದೇ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿದ ಬಳಿಕವಷ್ಟೇ ಸರ್ಕಾರ ಶಾಲೆಗಳನ್ನು ಆರಂಭಿಸುವ ಬಗ್ಗೆ ಸೂಕ್ತವಾದ ತೀರ್ಮಾನವನ್ನು ಕೈಗೊವೈದ್ಯಕೀಯ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ 17ರಿಂದ ಪದವಿ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ)ದ ಮಾರ್ಗಸೂಚಿ ಪ್ರಕಾರ ಪಾಠಪ್ರವಚನಗಳನ್ನು ನಡೆಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ.ಳ್ಳಲಿದೆ.

ಪದವಿ ಕಾಲೇಜುಗಳಿಗೆ ಮೊದಲ ಎರಡು ವಾರಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಹಾಜರಾಗುತ್ತಾರೆ? ಆ ವಿದ್ಯಾರ್ಥಿಗಳ ಹಾಗೂ ಪೋಷಕರ ಅಭಿಪ್ರಾಯವನ್ನು ಕ್ರೋಢೀಕರಿಸಿ ನಂತರ ಶಾಲಾಕಾಲೇಜುಗಳನ್ನು ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಕ್ಷಣ ಇಲಾಖೆಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆತುರಾತುರವಾಗಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಕೆಂಡ ಕಾರುತ್ತಾರೆ. ಈವರೆಗೂ ನಡೆಸಿದ ಪ್ರಯತ್ನವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಹೀಗಾಗಿ ಆತುರದ ನಿರ್ಧಾರ ಬೇಡ ಎಂದು ಅಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ವಿದ್ಯಾಗಮ ಯೋಜನೆ ಆರಂಭಿಸಿದ ವೇಳೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೆಲವು ಕಡೆ ಈ ಸೋಂಕಿಗೆ ಶಿಕ್ಷಕರೇ ಸಾವನ್ನಪ್ಪಿರುವ ಪ್ರಕರಣಗಳು ನಡೆದಿವೆ. ಹೀಗಾಗಿ ಈ ಯೋಜನೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.

ಪ್ರಸ್ತುತ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ದೀಪಾವಳಿ ಹಬ್ಬದ ನಂತರ ಚಳಿಗಾಲ ಆವರಿಸುವುದರಿಂದ ಮತ್ತೆ ಈ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ನಾವು ಯಾವುದೇ ತೀರ್ಮಾನಗಳನ್ನು ಕೈಗೊಳ್ಳಬೇಕಾದರೆ ತಜ್ಞರ ಸಲಹೆ ಮತ್ತು ಕೇಂದ್ರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಲಾಕಾಲೇಜುಗಳನ್ನು ಪ್ರಾರಂಭಿಸಿದರೆ ಖಾಸಗಿ ಲಾಭಕ್ಕೆ ಸರ್ಕಾರ ಇಳಿದಿದೆ ಎಂಬ ಆರೋಪ ಹೊತ್ತು ಕೊಳ್ಳಬೇಕಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ತೆರೆಯುವ ಪ್ರಸ್ತಾವನೆ ಕೈಬಿಡಿ ಎಂದು ಅಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಮುಂದಿನ ವಾರ ಉನ್ನತ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಶಿಕ್ಷಣ ಇಲಾಖೆಯ ಅಕಾರಿಗಳು, ಶಿಕ್ಷಣ ತಜ್ಞರು, ಕೋವಿಡ್ ತಜ್ಞರು ಸೇರಿದಂತೆ ಮತ್ತಿತರ ಜೊತೆ ಸಭೆ ನಡೆಸಲಾಗುವುದು.

ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಅಂತಿಮವಾಗಿ ಶಿಕ್ಷಣ ತಜ್ಞರು ಮತ್ತು ಪೋಷಕರ ಅಭಿಪ್ರಾಯ ಪಡೆದೇ ಸರ್ಕಾರ ತೀರ್ಮಾನ ಪ್ರಕಟಿಸಲಿದೆ. ಆತುರದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದು ನಿರ್ದೇಶನ ಮಾಡಿದ್ದಾರೆ.

ಒಂದು ವೇಳೆ ಶಾಲಾಕಾಲೇಜುಗಳನ್ನು ಆರಂಭಿಸಬೇಕಾದರೆ ಮೊದಲ ಹಂತದಲ್ಲಿ ಪ್ರಥಮ , ದ್ವಿತೀಯ ಪಿಯುಸಿ ಮತ್ತು 10ನೇ ತರಗತಿಯವರಿಗೆ ಮಾತ್ರ ಶಾಲಾಕಾಲೇಜು ಪ್ರಾರಂಭಿಸಬೇಕು. ಯಾವುದೇ ಕಾರಣಕ್ಕೂ ಏಕಕಾಲದಲ್ಲಿ ಪೂರ್ವ ಪ್ರಾಥಮಿಕದಿಂದ ಶಾಲೆಗಳನ್ನು ಆರಂಭಿಸದಂತೆ ತಾಕೀತು ಮಾಡಿದ್ದಾರೆ.

ಯುರೋಪ್ ರಾಷ್ಟ್ರಗಳಲ್ಲೂ ಕೂಡ ಕೊರೊನಾ ಸೋಂಕು ಹಬ್ಬಬಹುದೆಂದು ಎಚ್ಚರಿಸಲಾಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ನಾವು ಕೂಡ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುದೀರ್ಘ ಚರ್ಚೆ ನಡೆದ ಬಳಿಕವೇ ಅಂತಿಮ ತೀರ್ಮಾನ ನಾನೇ ಪ್ರಕಟಿಸುತ್ತೇನೆ ಎಂದು ಬಿಎಸ್‍ವೈ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

ಕಳೆದ ಮಾರ್ಚ್ ತಿಂಗಳಿನಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾಕಾಲೇಜುಗಳನ್ನು ಮುಚ್ಚಲಾಗಿತ್ತು. ಇದೀಗ ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಾರಂಭಿಸುವ ಬಗ್ಗೆ ಚರ್ಚೆ ಆರಂಭವಾಗಿದೆ.
ಸಚಿವ ಸುರೇಶ್‍ಕುಮಾರ್ ಅವರು ಈಗಾಗಲೇ ಶಿಕ್ಷಣ ತಜ್ಞರು, ಡಿಡಿಪಿಐ, ಬಿಇಒ, ಎಸ್‍ಡಿಎಂಸಿ ಸದಸ್ಯರು, ಜನಪ್ರತಿನಿಗಳ ಜೊತೆ ಸಭೆ ನಡೆಸಿದ್ದಾರೆ. ಇವರೆಲ್ಲರ ಅಭಿಪ್ರಾಯವನ್ನು ಕ್ರೋಢೀಕರಿಸಿ ಮುಖ್ಯಮಂತ್ರಿಗೆ ವರದಿ ನೀಡಲಿದ್ದಾರೆ.

ಒಂದು ಕಡೆ ಶಾಲಾಕಾಲೇಜುಗಳನ್ನು ಪ್ರಾರಂಭಿಸಬೇಕೆಂಬ ಬೇಡಿಕೆ ಇದ್ದರೆ ಮತ್ತೊಂದು ಕಡೆ ಇದಕ್ಕೆ ವಿರೋಧವೂ ವ್ಯಕ್ತವಾಗಿದೆ. ಹೀಗಾಗಿ ಸರ್ಕಾರ ಯಾವುದೇ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗದಂತಹ ಅಡಕತ್ತರಿಗೆ ಸಿಲುಕಿದೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ