Breaking News

ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಡಿಕ್ಕಿ: ಐದು ಜನ ಸ್ಥಳದಲ್ಲೇ ಸಾವು

Spread the love

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.

 

ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಲಗಳ ಪ್ರಕಾರ, ಕಲಬುರಗಿಯಿಂದ ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಟಾಟಾ ಸುಮೋ ಹೊರಟಿತ್ತು. ಗದಗದಿಂದ ಗಜೇಂದ್ರಗಡಕ್ಕೆ ಬಸ್ ಹೊರಟಿತ್ತು. ಮುಖಾಮುಖಿ ಡಿಕ್ಕಿ ಪರಿಣಾಮ ಬಸ್​ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು ಪತ್ತೆ ಇನ್ನೂ ಆಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನರೇಗಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ