Breaking News

ಧಾರವಾಡ ಜೈಲಿನಲ್ಲಿ ಕೈದಿ ಮತ್ತು ಸಿಬ್ಬಂದಿ ನಡುವೆ ಮಾರಾಮಾರಿ

Spread the love

ಧಾರವಾಡ: ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿರುವ ಘಟನೆ ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಘಟನೆಯಲ್ಲಿ ಜೈಲು ಸಿಬ್ಬಂದಿ ಮತ್ತು ಕೈದಿ ಇಬ್ಬರಿಗೂ ಗಾಯಗಳಾಗಿವೆ. ಮೋಹನ ಸಿದ್ದಪ್ಪ ಬಡಿಗೇರ ಗಾಯಗೊಂಡ ಜೈಲು ಸಿಬ್ಬಂದಿಯಾಗಿದ್ದು, ಪ್ರಶಾಂತ ಅಲಿಯಾಸ್ ಪಾಚು ಹಲ್ಲೆ ಮಾಡಿದ ಕೈದಿಯಾಗಿದ್ದಾನೆ. ಗಾಯಗೊಂಡ ಇಬ್ಬರನ್ನೂ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಅನೇಕ ದಿನಗಳಿಂದ ಧಾರವಾಡ ಕಾರಾಗೃಹದಲ್ಲಿದ್ದ ಪ್ರಶಾಂತ ಎಂಬ ಕೈದಿ ಬಾಚಣಿಕೆಯನ್ನೇ ಚಾಕೂವಿನಂತೆ ಮಾಡಿಕೊಂಡು ಜೈಲಿನ ಸಿಬ್ಬಂದಿಗೆ ಹೊಡೆದಿರುವ ಸಾಧ್ಯತೆಯಿದೆ. ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಕೈದಿ ಮತ್ತು ಸಿಬ್ಬಂದಿಗೆ ಸ್ಕ್ಯಾನಿಂಗ್ ಮಾಡಿಸಲಾಗಿದ್ದು, ಈಗಾಗಲೇ ಸಿಬ್ಬಂದಿಯನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ