Breaking News

ವಿಜಯಪುರದಲ್ಲಿ ಹಿಟ್​ ಆಯಂಡ್​ ರನ್​: ಹೈವೇ ಪಕ್ಕದಲ್ಲಿ ಕುಳಿತಿದ್ದ ನಾಲ್ವರು ಸ್ನೇಹಿತರ ಮೇಲೆ ಹರಿದ ಲಾರಿ

Spread the love

ವಿಜಯಪುರ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.

ಮೃತ ಯುವಕರನ್ನು ವಿಜಯಪುರ ವಜ್ರಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ (26) ಮತ್ತು ಪ್ರವೀಣ ಪಾಟೀಲ್ (30) ಎಂದು ಗುರುತಿಸಲಾಗಿದೆ.

ರಾತ್ರಿ 10 ಗಂಟೆಯ ಸುಮಾರಿಗೆ ನಾಲ್ವರು ಸ್ನೇಹಿತರು ಸೇರಿ ಊಟಕ್ಕೆ ಹೊರಗಡೆ ಹೋಗಿದ್ದಾರೆ. ಊಟ ಮುಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್​ಗೇಟ್ ಹತ್ತಿರದ ಟ್ರಕ್ ಬೇ ಬಳಿ ಇರುವ ಡಿವೈಡರ್ ಮೇಲೆ ಯುವಕರು ಕುಳಿತಿದ್ದರು. ಈ ವೇಳೆ ಜವರಾಯನ ರೂಪದಲ್ಲಿ ಬಂದ ಲಾರಿ ಯುವಕರ‌ ಮೇಲೆ ಹರಿದಿದೆ. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಕರೆ ಮಾಡಿ ತೀವ್ರವಾಗಿ ಗಾಯಗೊಂಡ ಯುವಕರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು‌ ಮುಂದಾಗಿದ್ದರು. ಆದ್ರೆ ಯುವಕರು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಾರಿಯಾಗಿದ್ದಾನೆ. ಇನ್ನು, ಈ ಘಟನೆಯಲ್ಲಿ ಯುವಕರಿಗೆ ಸೇರಿದ ಬೈಕ್​ಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

ಸುದ್ದಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಿರಿಮಲ್ಲ ತಳಕಟ್ಟಿ ಸೇರಿದಂತೆ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ. ಮೃತ ದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪ್ರೆಗೆ ರವಾನಿಸಿದರು. ಬದುಕಿ ಬಾಳಿ ಸುಂದರ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ನಾಲ್ವರು ಸ್ನೇಹಿತರು ದಾರುಣ ಅಂತ್ಯ ಕಂಡಿರುವುದರಿಂದ ಕುಟುಂಬಸ್ಥರು ಮತ್ತು ಸಂಬಂಧಿಕರು ಶೋಕ ಸಾಗರದಲ್ಲಿ‌ ಮುಳುಗಿದ್ದಾರೆ. ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ