Breaking News

ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದುಕೊಂದ ಪಾಪಿ ತಂದೆ

Spread the love

ಮೈಸೂರು : ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ.

ಮಾಕೋಡು ಗ್ರಾಮದ ಗಣೇಶ್​ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್​ನನ್ನು ಬಂಧಿಸಿದ್ದಾರೆ.

2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಪುತ್ರಿಯರು ಇದ್ದರು. ಬಳಿಕ ಲಕ್ಷ್ಮಿ ಮತ್ತೊಂದು ಗಂಡು ಮಗುವಿಗೆ ಜನ್ಮ ನೀಡಿ ಇಹಲೋಕ ತ್ಯಜಿಸಿದರು.

ನಂತರ ಗಣೇಶ್ ದೇವನಹಳ್ಳಿಯಿಂದ ತಮ್ಮ ಸ್ವಗ್ರಾಮ ಪಿರಿಯಾಪಟ್ಟಣದ ಮಾಕೋಡಿಗೆ ಬಂದು ವಾಸಿಸಲು ಆರಂಭಿಸಿದ್ದರು. ಈ ವೇಳೆ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಅತ್ತೆಯ ಬಳಿಯೇ ಬಿಟ್ಟು ಬಂದಿದ್ದರು. ಆದರೆ ಒಂದೂವರೆ ವರ್ಷದ ಮಗನನ್ನು ತನ್ನ ಬಳಿ ಇಟ್ಟುಕೊಂಡಿದ್ದರು. ಈ ವೇಳೆ ಮಗ ತುಂಬಾ ಅಳುತ್ತಿದ್ದ. ಈ ಹಿನ್ನೆಲೆ ಮಗನನ್ನು ಸಾಕಲಾಗದೇ ಕೆರೆಗೆ ಎಸೆದು ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ