Breaking News

ಮಹಾರಾಷ್ಟದ ಗಡಿ ತಾಲೂಕು ಜತ್ತದಲ್ಲಿ ಕನ್ನಡದ ಶಾಲೆಗಳಲ್ಲಿ ಶಿಕ್ಷರ ಕೊರತೆ

Spread the love

ಚಿಕ್ಕೋಡಿ: ಕರ್ನಾಟಕ ಗಡಿ ಹೊಂದಿರುವ ಮಹಾರಾಷ್ಟ್ರದ ಗ್ರಾಮಗಳಲ್ಲಿ ಕನ್ನಡ ಶಾಲೆಗಳು ದುಸ್ಥಿತಿಯಲ್ಲಿವೆ. ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿತ್ತು. ಆದರೆ ಆ ಶಾಲೆಗಳಿಗೆ ಶಿಕ್ಷಕರ ಕೊರತೆ ಇರುವುದರಿಂದ ಕ್ರಮೇಣ ಮಕ್ಕಳು ಮರಾಠಿ ಭಾಷೆಗಳತ್ತ ಒಲವು ತೋರುತ್ತಿದ್ದಾರೆ. ಪರಿಣಾಮ, ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವಂತಹ ಕುತಂತ್ರ ನಡೆಸುತ್ತಿದೆ ಎಂದು ಜತ್ತ ತಾಲೂಕಿನ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜತ್ತ ತಾಲೂಕಿನಲ್ಲಿ 82 ಕನ್ನಡ ಪ್ರಾಥಮಿಕ ಶಾಲೆಗಳಿವೆ. ಪ್ರತಿಯೊಂದು ಶಾಲೆಯಲ್ಲಿ ಒಂದರಿಂದ ಎಂಟನೇಯ ತರಗತಿ ಕಲಿಯೋದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಈ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿ ವಿದ್ಯಾಭ್ಯಾಸಕ್ಕೆ ಇಬ್ಬರೇ ಶಿಕ್ಷಕರನ್ನು ನೇಮಕ ಮಾಡಿ ಮಹಾ ಸರ್ಕಾರ ಕನ್ನಡ ಕಲಿಯುತ್ತಿರುವ ಮಕ್ಕಳ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅಲ್ಲಿನ ಸ್ಥಳೀಯ ಕನ್ನಡಿಗರು ಆರೋಪ ಮಾಡಿದ್ದಾರೆ.

ಬಹುತೇಕ ಕನ್ನಡ ಶಾಲೆಗಳಿಗೆ ಮೂಲಭೂತ ಸೌಕರ್ಯವಿಲ್ಲ. ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕ್ರಮೇಣ ಇಲ್ಲಿನ ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಜತ್ತ ತಾಲೂಕಿನ ಸಿಂಧೂರು ಗ್ರಾಮದ ಕನ್ನಡಿಗರಾದ ರಮಜಾನ್ ಮುಲ್ಲಾ ಮತ್ತು ಸುರೇಶ್ ರಾಮು ಮುಡ್ಸಿ ಹಾಗೂ ಅಣ್ಣಪ್ಪಾ ಚಂದಪ್ಪ ಅಂದಾಣಿ ಮಾತನಾಡಿ, ವೀರ ಸಿಂಧೂರು ಲಕ್ಷ್ಮಣ ಊರಾದ ಸಿಂಧೂರು ಗ್ರಾಮದಲ್ಲಿ ಕನ್ನಡ ಶಾಲೆಯಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿನ ಶಿಕ್ಷಕರ ಕೊರತೆಯಿಂದ ಹಲವು ಬಾರಿ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ಮಾಡಿದರೂ ಅಧಿಕಾರಿಗಳು ಬಗ್ಗುತ್ತಿಲ್ಲ. ನಾವು ಮೂಲತವಾಗಿ ಕನ್ನಡಿಗರಾಗಿರುವುದರಿಂದ ಪಕ್ಕದ ಕರ್ನಾಟಕ ರಾಜ್ಯದ ಅಥಣಿ ತಾಲೂಕಿನ ಕಕಮರಿ ಕೊಟ್ಟಲಗಿ ಗ್ರಾಮಗಳಿಗೆ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ.

ಆದರೆ ಮಹಾರಾಷ್ಟ್ರ ಸರ್ಕಾರ ಇಲ್ಲಿನ ಕನ್ನಡ ಶಾಲೆಗಳಿಗೆ ಶಿಕ್ಷಕರ ಕೊರತೆ ನೀಗಿಸುತ್ತಿಲ್ಲ. ಈ ಗ್ರಾಮದ ಶಾಲೆಯಲ್ಲಿ ಒಂದರಿಂದ ಎಂಟನೇ ತರಗತಿ ವಿದ್ಯಾಭ್ಯಾಸಕ್ಕೆ ಅನುಕೂಲವಿದೆ. ಆದರೆ ಎಂಟು ತರಗತಿಗಳಿಗೆ ಮೂರು ಜನ ಶಿಕ್ಷಕರು ಇರುವುದರಿಂದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿದೆ. ನಾವು ಅಲ್ಪಸ್ವಲ್ಪ ಹಣವಂತರಿರುವುದರಿಂದ ನಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ವಿದ್ಯಾಭ್ಯಾಸಕ್ಕೆ ಕಳುಹಿಸುತ್ತೇವೆ. ಆದರೆ ಗಡಿ ಹೊಂದಿರುವ ಗ್ರಾಮಗಳಲ್ಲಿ ಹೆಚ್ಚಾಗಿ ಕನ್ನಡಿಗರು ಇದ್ದಾರೆ. ಅದರಲ್ಲೂ ಬಡತನ ರೇಖೆಗಿಂತ ಕೆಳಗಿರುವ ಜನಸಂಖ್ಯೆ ಹೆಚ್ಚು ಇರೋದ್ರಿಂದ ಈ ಕುಟುಂಬದ ಮಕ್ಕಳು ಅನಿವಾರ್ಯವಾಗಿ ಇಲ್ಲೇ ಕಲಿಯಬೇಕು. ಶಿಕ್ಷಕರ ಕೊರತೆಯಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ.


Spread the love

About Laxminews 24x7

Check Also

ನದ ಶೆಡ್​ಗೆ ಮಂಜೂರಾಗದ ಹಣ: ಪಂಚಾಯತ್ ಕಚೇರಿಯೊಳಗೆ ಎಮ್ಮೆ ಕಟ್ಟಿದ ರೈತ

Spread the loveಚಿಕ್ಕೋಡಿ: ದನದಕೊಟ್ಟಿಗೆ ನಿರ್ಮಾಣದ ಹಣ ಮಂಜೂರಾಗದ ಹಿನ್ನೆಲೆ ಬೇಸತ್ತ ರೈತರೊಬ್ಬರು ಗ್ರಾಮ ಪಂಚಾಯತ್ ಕಚೇರಿ ಒಳಗೆ ಎಮ್ಮೆ ಕಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ