Breaking News

ಕಳ್ಳತನ‌ದಲ್ಲಿ ಭಾಗಿಯಾದ ಪೊಲೀಸ್ ಕಾನ್​ಸ್ಟೆಬಲ್; ಸೇವೆಯಿಂದ ವಜಾಗೊಳಿಸಲು ಶಿಫಾರಸು

Spread the love

ಬೆಂಗಳೂರು: ಕ್ಯಾಸಿನೋ ಆಟಕ್ಕಿಳಿದು ನಷ್ಟಕ್ಕೊಳಗಾಗಿ ಲಕ್ಷಾಂತರ ರೂ. ಸಾಲ ತೀರಿಸಲು ಮನೆ ಕಳವು ಮಾಡಿದ ಆರೋಪದಡಿ ಪೊಲೀಸ್ ಕಾನ್​ಸ್ಟೆಬಲ್‌ನನ್ನು ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದರು.

ಇದೀಗ ಆತನನ್ನು ಸೇವೆಯಿಂದ ವಜಾಗೊಳಿಸಲು ಪೊಲೀಸ್ ಇಲಾಖೆ ಶಿಫಾರಸು ಮಾಡಿದೆ.

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಮೂಲದ ಯಲ್ಲಪ್ಪ 2023ರ ಫೆಬ್ರವರಿಯಲ್ಲಿ ಬನಶಂಕರಿ ಠಾಣೆ ವ್ಯಾಪ್ತಿಯಲ್ಲಿ ಅಭಿಷೇಕ್ ಅಲಿಯಾಸ್ ಅಭಿ ಜತೆ ಸೇರಿ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ. ಆದರೆ, ಕಚೇರಿಯಲ್ಲಿಟ್ಟಿದ್ದ ಅಲಾರಾಂ ಗಂಟೆ ಜೋರಾಗಿ ಶಬ್ಧ ಮಾಡಿದ್ದರಿಂದ ಸ್ಥಳದಿಂದ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಭಿಯನ್ನು ಬಂಧಿಸಲಾಗಿತ್ತು. ಈ ವೇಳೆ ಕಾನ್‌ಸ್ಟೇಬಲ್ ಕೃತ್ಯ ಬಯಲಾಗಿದೆ. ಆದರೆ, ಅಷ್ಟರಲ್ಲಿ ಯಲ್ಲಪ್ಪ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ. ಹೀಗಾಗಿ ಆರೋಪಿಯನ್ನು ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಆದೇಶಿಸಲಾಗಿತ್ತು.

ಮೇ ತಿಂಗಳಿನಲ್ಲಿ ತನ್ನ ಅಮಾನತು ಆದೇಶ ಹಿಂಪಡೆದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ನಿಯೋಜಿಸಲಾಗಿತ್ತು. ಈ ನಡುವೆಯೂ ಅ.3ರಂದು ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಯಲ್ಲಪ ಬೈಕ್‌ನಲ್ಲಿ ಮನೆಗೆ ಹೋಗಿದ್ದು ಕಂಡುಬಂದಿತ್ತು. ಈ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿಚಾರಣೆ ವೇಳೆ ಆಗಸ್ಟ್‌ನಲ್ಲಿ ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ಅಂಚೆ ಕಚೇರಿಯಲ್ಲಿ 27 ಸಾವಿರ ರೂ. ಕಳವು ಪ್ರಕರಣ ಹಾಗೂ ಸೆಪ್ಟೆಂಬರ್‌ನಲ್ಲಿ ಚಂದ್ರಾಲೇಔಟ್‌ನಲ್ಲಿ ಬೀಗ ಒಡೆದು ಮನೆ ಕಳವು ಮಾಡಿರುವ ಪ್ರಕರಣ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ