ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪೂರ್ಣಿಮಾ ಹಾಗೂ ಶ್ರೀನಿವಾಸ್ ಮೀನಿಗೆ ಗಾಳ ಹಾಕ್ತಿದ್ದೆ, ಆದರೆ ಕಚ್ತಾ ಇರಲಿಲ್ಲ. ಈಗ ಅವರೊಟ್ಟಿಗೆ ಅಪಾರ ಸಂಖ್ಯೆಯಲ್ಲಿ ಜನರು ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ನೊಂದ ಜನರಿಗೆ ರಕ್ಷಣೆ ಕೊಡುವ ಸಂಕಲ್ಪ ಮಾಡಿದ್ದೇವೆ.
ಐದು ಗ್ಯಾರಂಟಿ ಅನುಷ್ಠಾನಕ್ಕೆ ತಂದಿದ್ದೇವೆ. ಕೊಟ್ಟ ಮಾತಿನಂತೆ ಈವರೆಗೆ ನಾಲ್ಕು ಜಾರಿಗೆ ತಂದಿದ್ದೇವೆ. ಕರ್ನಾಟಕ ಮಾದರಿ ಎಂದು ದೇಶಕ್ಕೆ ತೋರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸುತ್ತಿದ್ದೇವೆ ಎಂದು ಹೇಳಿದರು.