Breaking News

ಅ.23ರಿಂದ 25ರವರೆಗೆ ಕಿತ್ತೂರು ಉತ್ಸವ:

Spread the love

ಬೆಳಗಾವಿ, ಅಕ್ಟೋಬರ್​​​ 20: ಅ.23ರಿಂದ 25ರವರೆಗೆ ಅದ್ಧೂರಿಯಾಗಿ ಕಿತ್ತೂರು ಉತ್ಸವ ಆಚರಣೆ ನಡೆಯಲಿದೆ. ಈ ಬಾರಿ ಮೈಸೂರು ದಸರಾ ಇರುವುದರಿಂದ ಸಿಎಂ ಸಿದ್ದರಾಮಯ್ಯ(Siddaramaiah)ಉದ್ಘಾಟನೆಗೆ ಬರುತ್ತಿಲ್ಲ ಎಂದು ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್​ ತಿಳಿಸಿದ್ದಾರೆ. ಚನ್ನಮ್ಮನ ಕಿತ್ತೂರು ಉತ್ಸವ 2023 ಹಿನ್ನೆಲೆ ಜಿಲ್ಲೆಯಲ್ಲಿ ಆಯೋಜಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಕೋಟೆ ಆವರಣದಲ್ಲಿ ಅದ್ದೂರಿಯಾಗಿ ಉತ್ಸವ ನಡೆಯಲಿದೆ. ಉತ್ಸವದ ಮುಖ್ಯ ವೇದಿಕೆ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

2 ಕೋಟಿ ರೂ. ಅನುದಾನ ನೀಡಿದ ಸರ್ಕಾರ

ಕಿತ್ತೂರು ಉತ್ಸವ 5 ಕೋಟಿ ರೂ. ಅನುದಾನವನ್ನ ಸರ್ಕಾರಕ್ಕೆ ಕೇಳಿದ್ದೇವೆ. ಆದರೆ ಸರ್ಕಾರ 2 ಕೋಟಿ ರೂ. ಅನುದಾನವನ್ನ ನೀಡಿದೆ. ಈ ಬಾರಿ ಕಿತ್ತೂರು ಉತ್ಸವದ ಜತೆಗೆ ಚನ್ನಮ್ಮನ ತವರು ಕಾಕತಿಯಲ್ಲಿ ಕಾಕತಿ ಉತ್ಸವ ಮಾಡಲಾಗುವುದು ಎಂದರು.

 

ಅಕ್ಟೋಬರ್ 23 ರಂದು ಸಂಚಿತ ಹೆಗಡೆ ತಂಡದಿಂದ ಮತ್ತು ಅಕ್ಟೋಬರ್ 25 ರಂದು ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ಕಾಲ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ, ಜಾನಪದ ಕಲಾವಿದರಿಂದ ವಿವಿಧ ಕಾರ್ಯಕ್ರಮ ನಡೆಯಲಿವೆ ಎಂದು ಹೇಳಿದ್ದಾರೆ.

 

ಜಿಲ್ಲಾಡಳಿತದಿಂದ ಈ ಬಾರಿ ಕರ್ನಾಟಕದ ನಾನಾ ಮೂಲೆಯ ಪ್ರತಿಭಾನ್ವಿತ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಲಾವಿದರಿಗೆ ಅವಕಾಶ ನೀಡಲಾಗಿದೆ ಎಂದರು.

ಕಿತ್ತೂರು ಉತ್ಸವ ಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ

2023ರ ಕಿತ್ತೂರು ಉತ್ಸವ ಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತಿಸಲಾಗಿದೆ. ಈ ವೇಳೆ ಕಿತ್ತೂರು ಉತ್ಸವ ಜ್ಯೋತಿಗೆ ಪೂಜೆ ಸಲ್ಲಿಸುವ ಮೂಲಕ ಬೆಳಗಾವಿ ಜಿಲ್ಲಾಡಳಿತ ಸ್ವಾಗತಿಸಿದೆ. ಡೊಳ್ಳು ಕುಣಿತ, ಕರಡಿ ಕುಣಿತ ಕಲಾವಿದರಿಂದ ಜ್ಯೋತಿಗೆ ಸ್ವಾಗತ ಮಾಡಲಾಗಿದೆ. ಕಿತ್ತೂರು ಉತ್ಸವ ಜ್ಯೋತಿಗೆ ಪೂಜೆ ಸಲ್ಲಿಸಿದ ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಮೇಯರ್, ಉಪ ಮೇಯರ್, ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಭಾಗಿ ಆಗಿದ್ದರು.


Spread the love

About Laxminews 24x7

Check Also

ಪದವಿ ಮುಗಿದ ನಂತರವೇ ನಿಜವಾದ ಜೀವನ ಆರಂಭ

Spread the loveಮೈಸೂರು: ಶಿಕ್ಷಣ ಮುಗಿದ ನಂತರ ಜೀವನ ಮುಗಿದಂತಾಗುವುದಿಲ್ಲ. ಅದು ನಿಮ್ಮ ಹೊಸ ಪ್ರಯಾಣದ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ