Breaking News

ಮತ್ತೆ ಚಲಾವಣೆಗೆ ಬರುತ್ತಾ 1,000 ರೂಪಾಯಿ ನೋಟು?: ಹೀಗೊಂದು ವದಂತಿ

Spread the love

ನವದೆಹಲಿ: ಏಳು ವರ್ಷಗಳ ಹಿಂದೆ ರದ್ದಾದ 1,000 ರೂಪಾಯಿ ಮುಖಬೆಲೆಯ ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಭಾರತೀಯ ರಿಸರ್ವ್​​ ಬ್ಯಾಂಕ್​ (ಆರ್​ಬಿಐ) ಹಳೆಯ ನೋಟನ್ನು ಮತ್ತೆ ಪರಿಚಯಿಸುವ ಆಲೋಚನೆಯಲ್ಲಿಲ್ಲ ಎಂದೂ ವರದಿಯಾಗಿದೆ.

 

2016ರಲ್ಲಿ ನವೆಂಬರ್​ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಎಂದು ಘೋಷಿಸಿತ್ತು. ಆರ್​ಬಿಐ 500 ರೂ.ಗಳ ಹೊಸ ನೋಟುಗಳು ಹಾಗೂ 2000 ರೂ. ಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿತ್ತು. ಇದೇ ಮೇ ತಿಂಗಳಲ್ಲಿ 2,000 ನೋಟುಗಳ ಚಲಾವಣೆಯನ್ನು ಹಿಂಪಡೆದಿದೆ. ಇದರ ನಡುವೆ 1,000 ರೂ. ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ವದಂತಿ ಆಗಾಗ್ಗೆ ಹಬ್ಬುತ್ತಲಿದೆ.

 

 

ಈಗ ಕೂಡ ಅಂತಹದ್ದೇ ಸುದ್ದಿ ಹರಿದಾಡುತ್ತಿದೆ. ಆದರೆ, ಈ 1,000 ರೂ. ಮುಖ ಬೆಲೆಯ ನೋಟುಗಳನ್ನು ಮರು ಚಲಾವಣೆಗೆ ತರುವುದನ್ನು ಆರ್​ಬಿಐ ಪರಿಗಣಿಸುತ್ತಿಲ್ಲ ಎಂಬುದಾಗಿ ಮೂಲಗಳು ತಿಳಿಸಿವೆ ಎಂದು ಎಎನ್​ಐ ಸುದ್ದಿಸಂಸ್ಥೆ ಶುಕ್ರವಾರ ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿದೆ.

ಹಣದುಬ್ಬರದ ಮೇಲೆ ಅರ್ಜುನನ ಕಣ್ಣು-ಆರ್​ಬಿಐ: ಮತ್ತೊಂದೆಡೆ, ಆರ್​ಬಿಐ ಗವರ್ನರ್​ ಶಕ್ತಿಕಾಂತ ದಾಸ್ ಇಂದು ‘ಕೌಟಿಲ್ಯ ಆರ್ಥಿಕ ಸಮಾವೇಶ’ 2023ರಲ್ಲಿ ಬಡ್ಡಿದರ ಹಾಗೂ ಹಣದುಬ್ಬರ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದರು. ”ಈ ಕ್ಷಣಕ್ಕೆ ಬಡ್ಡಿದರವು ಅಧಿಕವಾಗಿ ಉಳಿಯುವ ಸಾಧ್ಯತೆಯಿದೆ. ಕೇಂದ್ರೀಯ ಬ್ಯಾಂಕ್​ ಹೆಚ್ಚಿನ ಜಾಗರೂಕತೆ ಹೊಂದಿರುತ್ತದೆ. ಹಣದುಬ್ಬರದಲ್ಲಿ ನಿರಂತರ ಕುಸಿತವನ್ನು ಖಚಿತಪಡಿಸಿಕೊಳ್ಳಲು ಅರ್ಜುನನ ಕಣ್ಣು ಇರಿಸುತ್ತದೆ” ಎಂದು ಒತ್ತಿ ಹೇಳಿದರು.

”ಬಡ್ಡಿ ದರ ಹೆಚ್ಚಾಗಿರುತ್ತದೆ. ಅದು ಎಷ್ಟು ಕಾಲ ಇದೇ ಇರುತ್ತದೆ ಎಂಬುವುದನ್ನು ಸಮಯ ಮತ್ತು ಜಗತ್ತಿನ ಪರಿಸ್ಥಿತಿ ಮಾತ್ರ ಹೇಳಲು ಸಾಧ್ಯ ಎಂದು ನಾನು ಭಾವಿಸುತ್ತೇನೆ. ಈ ಬಗ್ಗೆ ನಾವು ಹೆಚ್ಚು ಜಾಗರೂಕರಾಗಿದ್ದೇವೆ. ತೆಗೆದುಕೊಳ್ಳಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಿದ್ಧ. ಹಣದುಬ್ಬರದಲ್ಲಿ ನಿರಂತರ ಇಳಿಕೆಯನ್ನು ನಾವು ನೋಡಬೇಕಾಗಿದೆ. ಶೇ.4ಕ್ಕೆ ತಲುಪುವುದು ನಮ್ಮ ಉದ್ದೇಶ” ಎಂದು ವಿವರಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ