Breaking News

ಪೊಲೀಸ್ ಹುತಾತ್ಮರ ದಿನಾಚರಣೆ: ಗೌರವ ಸಲ್ಲಿಕೆ ವೇಳೆ ಕಣ್ಣೀರು ಹಾಕಿದ ಮೃತ ಪೊಲೀಸ್ ತಾಯಿ

Spread the love

ಧಾರವಾಡ: ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಧಾರವಾಡ ಜಿಲ್ಲಾ ಡಿಎಆರ್ ಮೈದಾನದಲ್ಲಿ ಪೊಲೀಸ್​ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ವೇಳೆ, ಹುತಾತ್ಮ ಪೊಲೀಸ್​ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸುವಾಗ ಮೃತ ಹುತಾತ್ಮ ಪೊಲೀಸ್​ ಕಾನ್ಸ್​ಟೇಬಲ್ ಹುಚ್ಚಪ್ಪ ಮಲ್ಲಣ್ಣನವರ್​ ಕುಟುಂಬಸ್ಥರು ಕಣ್ಣೀರು ಹಾಕಿದರು‌.

ಗೌರವ ನಮನ ಸಲ್ಲಿಸುವ ವೇಳೆ ಮೃತ ಪೊಲೀಸ್ ತಾಯಿ ನೀಲವ್ವ, ತಂದೆ ಹನುಮಪ್ಪ, ತಂಗಿ, ಅಕ್ಕ, ಮಾವ ಮತ್ತು ತಮ್ಮ ಮಲ್ಲಿಕಾರ್ಜುನ ಮೃತ ಹುಚ್ಚಪ್ಪನನ್ನು ನೆನೆದು ಭಾವುಕರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಹಾಗೂ ಗಣ್ಯರು ಮಲ್ಲಣ್ಣನವರ್​ ಕುಟುಂಬ ಸದಸ್ಯರನ್ನು ಸಂತೈಸಿದರು. ಗಣೇಶೋತ್ಸವ ಆಚರಣೆ ವೇಳೆ ಧಾರವಾಡದ ಯರಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಚ್ಚಪ್ಪ ಮಲ್ಲಣ್ಣನವರು ಮೃತಪಟ್ಟಿದ್ದರು. ಧಾರವಾಡದ ಗರಗ ಪೊಲೀಸ್ ಠಾಣೆಯಲ್ಲಿ ಕಾನ್ಸ್​​​ಟೇಬಲ್ ಆಗಿ ಹುಚ್ಚಪ್ಪ ಕೆಲಸ ಮಾಡುತ್ತಿದ್ದರು.

ಮಾನವೀಯತೆ ಮೆರೆದ ಗರಗ ಠಾಣೆ ಪೊಲೀಸ್ ಸಿಬ್ಬಂದಿ: ಗರಗ ಪೊಲೀಸ್ ಠಾಣೆ ಹಾಗೂ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿರುವ ಹುಚ್ಚಪ್ಪನ ಸಹೋದ್ಯೋಗಿಗಳು ಪಿಎಸ್‌ಐ ಎಫ್.ಎಮ್.ಮಂಟೂರ ನೇತೃತ್ವದಲ್ಲಿ ಸುಮಾರು 1 ಲಕ್ಷ ಐದು ಸಾವಿರ ರೂ.ಗಳನ್ನು ಆರ್ಥಿಕ ಸಹಾಯಧನವಾಗಿ ಇಂದಿನ ಕಾರ್ಯಕ್ರಮದಲ್ಲಿ ಎಸ್.ಪಿ.ಡಾ.ಗೋಪಾಲ ಬ್ಯಾಕೋಡ ಅವರ ಮೂಲಕ ಹುಚ್ಚಪ್ಪನ ಕುಡುಂಬಕ್ಕೆ ನೀಡಿದರು. ಪೊಲೀಸ್ ಇಲಾಖೆ ಮತ್ತು ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯ ಹಾಗೂ ಆರ್ಥಿಕ ನೆರವನ್ನು ಮೃತ ಹುಚ್ಚಪ್ಪನ ಕುಟುಂಬಕ್ಕೆ ತಲುಪಿಸಲು ಎಲ್ಲ ಸಹಾಯ, ನೆರವು ನೀಡಲಾಗುವುದು ಎಂದು ಎಸ್.ಪಿ ತಿಳಿಸಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ