Breaking News

ರಾಜ್ಯದಲ್ಲಿ ವಿದ್ಯುತ್ ಕೊರತೆ ಕುರಿತಂತೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ

Spread the love

ಬೆಂಗಳೂರು: ನಾವು ವೆಸ್ಟ್​ಎಂಡ್​ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ. ಜನರ ನಡುವೆ ಇದ್ದು, ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

 

ಕಮಿಷನ್​ಗಾಗಿ ಕೃತಕ ವಿದ್ಯುತ್ ಕೊರತೆ ಸೃಷ್ಟಿಸಲಾಗುತ್ತಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಸಂಬಂಧ ಎಕ್ಸ್​ನಲ್ಲಿ ಸ್ಪಷ್ಟೀಕರಣ ನೀಡಿರುವ ಸಿಎಂ ಸಿದ್ದರಾಮಯ್ಯ, ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ. ನಾವು ವೆಸ್ಟ್​ಎಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ಸಿಎಂ ತಿರುಗೇಟು ನೀಡಿದರು.


Spread the love

About Laxminews 24x7

Check Also

ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ: ಅಧ್ಯಕ್ಷ ರವಿಕುಮಾರ್‌ ಕೊನೆಗೂ ರಾಜೀನಾಮೆ

Spread the loveಬೆಂಗಳೂರು, (ಸೆಪ್ಟೆಂಬರ್ 05): ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (Bhovi Development Corporation) ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ