Breaking News
Home / ರಾಜಕೀಯ / ಅ.24ರಂದು ಸಂಜೆ 4.40ಕ್ಕೆ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ.. ಆ ದಿನದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ!

ಅ.24ರಂದು ಸಂಜೆ 4.40ಕ್ಕೆ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ.. ಆ ದಿನದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ!

Spread the love

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ನಿಮಿತ್ತ ಅ.24 ರಂದು ಮಧ್ಯಾಹ್ನ 1.46 ರಿಂದ 2.08 ವರಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮೈಸೂರಿನ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಪೂಜೆ ಹಮ್ಮಿಕೊಳ್ಳಲಾಗಿದೆ.

ಹಾಗೂ ಅರಮನೆಯ ಒಳ ಆವರಣದಲ್ಲಿ ಸಂಜೆ 4.40 ರಿಂದ 5 ರವರೆಗೆ ಸಲುವ ಶುಭ ಮೀನ ಲಗ್ನದಲ್ಲಿ ವಿಶ್ವ ವಿಖ್ಯಾತ ವಿಜಯದಶಮಿ ಮೆರವಣಿಗೆಗೆ, ಗಣ್ಯರಿಂದ ಚಿನ್ನದ ಅಂಬಾರಿಗೆ ಪುಷ್ವಾರ್ಚನೆಯ ಮೂಲಕ ಚಾಲನೆ ನೀಡಲಾಗುತ್ತದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು ರಾಜ ವಂಶಸ್ಥರಾದ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್​, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ, ಮೇಯರ್​ ಶಿವಕುಮಾರ್​ ಭಾಗವಹಿಸಲಿದ್ದಾರೆ.

ದಸರಾ ಪಂಜಿನ ಕವಾಯತು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅ. 24 ರಂದು ಸಂಜೆ 7.30ಕ್ಕೆ ಮೈದಾನದಲ್ಲಿ ಪಂಜಿನ ಕವಾಯತು (ಟಾರ್ಚ್ ಲೈಟ್ ಪೆರೇಡ್) ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್​ರವರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​, ಕೇಂದ್ರ ವಿತ್ತ ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದಲ್ಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯೋಮ ತಂತ್ರಜ್ಞಾನ ಖಾತೆ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ ನಾರಾಯಣಸ್ವಾಮಿ, ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಭಗವಂತ್ ಖೂಬಾ ಪಾಲ್ಗೊಳ್ಳುವರು.

ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ, ಮೇಯರ್ ಶಿವಕುಮಾರ್ ಭಾಗವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ತನ್ವೀರ್ ಸೇಠ್ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಶೇಷ ಚೇತನರಿಗೆ ಜಂಬೂಸವಾರಿ ವೀಕ್ಷಿಸಲು ಆಸನ ವ್ಯವಸ್ಥೆ: ಮೈಸೂರು ನಗರದ ನ್ಯೂ ಸಯಾಜಿ ರಾವ್ ರಸ್ತೆ ಬಂಬೂ ಬಜಾರ್​ನಲ್ಲಿರುವ ಸರ್ಕಾರಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸುಮಾರು 200 ವಿಶೇಷ ಚೇತನರಿದ್ದು, ಈ ಶಾಲೆಯ ಮುಂಭಾಗ ಆವರಣದಲ್ಲಿ ಫುಟ್​ ಪಾತ್​ನಲ್ಲಿ ಮಕ್ಕಳಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೇಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ