Breaking News
Home / ರಾಜಕೀಯ / ಭೀಮಾ ತೀರದಲ್ಲಿ ದ್ವೇಷಕ್ಕಾಗಿ ಕೊಲೆಗೈದ ಆರೋಪಿಗಳ ಬಂಧನ

ಭೀಮಾ ತೀರದಲ್ಲಿ ದ್ವೇಷಕ್ಕಾಗಿ ಕೊಲೆಗೈದ ಆರೋಪಿಗಳ ಬಂಧನ

Spread the love

ಕಲಬುರಗಿ: ಇಡೀ ಜಿಲ್ಲೆಯನ್ನೇ ತಲ್ಲಣಗೊಳಿಸಿದ್ದ ಶಾಸಕ ಎಂವೈ ಪಾಟೀಲ್ ಅವರ ಆಪ್ತ ಮದರಾ (ಬಿ) ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಬಿರಾದಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ದೇವಲಗಾಣಗಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಅದರಂತೆ ಇದೇ ತಾಲೂಕಿನ ಸಿದನೂರ ಗ್ರಾಮದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರೇವೂರ್ (ಬಿ) ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮದರಾ (ಬಿ) ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಬಿರಾದಾರ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮದರಾ (ಬಿ) ಗ್ರಾಮದ ಗುರುಭೀಮ ಯಂಕಂಚಿ (57), ದತ್ತು ಯಂಕಂಚಿ(32), ನಿಂಗಣ್ಣ ಯಂಕಂಚಿ (44), ಪ್ರಜ್ವಲ ಘತ್ತರಗಿ (19), ಪುಂಡಲಿಂಗ ಯಂಕಂಚಿ (21) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ 2 ಬೊಲೆರೊ ವಾಹನ, 2 ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ.

ಹತ್ಯೆ ಪ್ರಕರಣದ ವಿವರ: ಭೀಮಾ ತೀರದ ಅಫಜಲಪುರ ತಾಲೂಕು ಚೌಡಾಪುರದಲ್ಲಿ ಅಕ್ಟೋಬರ್ 13 ರಂದು ಬೆಳಗ್ಗೆ 11 ಗಂಟೆಗೆ ಕೊಲೆ ನಡೆದಿತ್ತು. ಮದರಾ (ಬಿ) ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೌಡಪ್ಪಗೌಡ ಬಿರಾದಾರ (57) ಚವಡಾಪುರ ಬಸ್ ನಿಲ್ದಾಣ ಎದುರಿನ ಗ್ಯಾರೇಜ್ ಹತ್ತಿರ ಅಂತ್ಯ ಸಂಸ್ಕಾರಕ್ಕೆಂದು ಶವ ಸಾಗಿಸುವ ಉಚಾಯಿಗೆ ವೆಲ್ಡಿಂಗ್ ಮಾಡಿಸಲು ಆಗಮಿಸಿದಾಗ ಘಟನೆ ನಡೆದಿತ್ತು. ಗ್ರಾಮದಲ್ಲಿ ಬಿರಾದಾರ ಮತ್ತು ಯಂಕಂಚಿ ಕುಟುಂಬದ ಮಧ್ಯೆ ಕಳೆದ 30 ವರ್ಷಗಳಿಂದ ಇದ್ದ ಹಳೆಯ ವೈಷಮ್ಯದ ಹಿನ್ನೆಲೆ ಗೌಡಪ್ಪಗೌಡ ಬಿರಾದಾರ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹೊಡೆದು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗಳು ತಲೆಮರೆಸಿಕೊಂಡು ಪರಾರಿಯಾಗಿದ್ದರು. ಈ ಕುರಿತು ದೇವಲ ಗಾಣಗಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನುಳಿದ ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ