Breaking News
Home / ರಾಜಕೀಯ / ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ

Spread the love

ಬಾರಾಮತಿ (ಮಹಾರಾಷ್ಟ್ರ): ಕಳೆದ ಎರಡು ದಿನಗಳ ಹಿಂದಷ್ಟೇ ಬಾರಾಮತಿಯಲ್ಲಿ ನಡೆದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗೆ ಮತ್ತೆ ತರಬೇತಿ ವಿಮಾನವೊಂದು ಪತನವಾಗಿದೆ.

ಇಲ್ಲಿನ ಹಳೆ ಸಹ್ಯಾದ್ರಿ ಹಸುವಿನ ತೋಟದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಬಾರಾಮತಿಯಲ್ಲಿ ವಾಯುಯಾನ ತರಬೇತಿ ಸಂಸ್ಥೆ ಇದೆ. ಕಳೆದ ಕೆಲವು ದಿನಗಳಲ್ಲಿ ವಿಮಾನ ಅಪಘಾತ ಸಂಭವಿಸಿದ ಐದನೇ ಘಟನೆ ಇದಾಗಿದ್ದು, ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ದಿಢೀರ್ ವಿಮಾನ ಅಪಘಾತದಿಂದಾಗಿ ಸ್ಥಳೀಯ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಕಳೆದ ಕೆಲವು ದಿನಗಳಿಂದ ಕಲಿಕಾ ತರಬೇತಿ ವಿಮಾನ ಅಪಘಾತಕ್ಕೀಡಾದ ಘಟನೆಗಳು ನಡೆಯುತ್ತಲೇ ಇವೆ. ಬಾರಾಮತಿ ಮತ್ತು ಇಂದಾಪುರದಲ್ಲಿ ವಿಮಾನ ಅಪಘಾತ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ಸೂಕ್ತ ಯೋಜನೆ ರೂಪಿಸಬೇಕೆಂಬ ಆಗ್ರಹ ಕೇಳಿಬಂದಿದೆ. ವಿಮಾನ ಪತನದಿಂದ ಪ್ರಾಣಹಾನಿಯಾಗುವ ಭೀತಿ ಎದುರಾಗಿದೆ.


Spread the love

About Laxminews 24x7

Check Also

ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ

Spread the love ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ