ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿತ್ತು.
ಈ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ ಶಾರದಾ ಕೇಟರರರ್ಸ್ಗೆ ಊಟ ಸರಬರಾಜು ವಹಿಸಲಾಗಿತ್ತು. ಆದರೆ, ಮಧ್ಯಾಹ್ನ ಪೂರೈಸಲಾದ ಊಟದ ಪೈಕಿ ಮೊಸರನ್ನದಲ್ಲಿ ಹುಳು ಪತ್ತೆಯಾಗಿದ್ದು, ಸಿಬ್ಬಂದಿಗಳ ವಾಟ್ಸ್ಆಯಪ್ ಗ್ರೂಪ್‌ನಲ್ಲಿ ಫೋಟೋ ಹರಿದಾಡುತ್ತಿದೆ. ಈ ಸಂಬಂಧ ಶುಚಿತ್ವ ಕಾಪಾಡದ ಕೇಟರರ್ಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Laxmi News 24×7