Breaking News

ಬರ ಪರಿಸ್ಥಿತಿ: ಕೇಂದ್ರದಿಂದ 17,901.73 ಕೋಟಿ ರೂ. ಪರಿಹಾರ ಕೋರಿದ ರಾಜ್ಯ ಸರ್ಕಾರ!

Spread the love

ರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ ರೂ. 17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ಕೇಂದ್ರದಿಂದ
ರೂ.17,901.73 ಕೋಟಿಗಳ ಪರಿಹಾರವನ್ನು ರಾಜ್ಯ ಸರ್ಕಾರ ಕೋರಿದೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗ ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿತು. ಈ ಸಭೆಗಳಲ್ಲಿ ಅವರು ರಾಜ್ಯದ ಭೀಕರ ಸ್ಥಿತಿಯ ಕುರಿತು ಸಮಗ್ರವಾದ ಮಾಹಿತಿ ನೀಡಿದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಎನ್ಡಿಆರ್ಎಫ್ ನಿಯಮಾವಳಿ ಪ್ರಕಾರ ಒಟ್ಟು ರೂ.
17,901.73 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿದ್ದೇವೆ, ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ