Breaking News

ನ.1ರ ಬಳಿಕ ಯಾವ ದಿನವಾದರೂ ಸರಿ, ಬಹಿರಂಗ ಚರ್ಚೆಗೆ ಸಮಯ ಫಿಕ್ಸ್​ ಮಾಡಿ; ಡಿ ಕೆ ಶಿವಕುಮಾರ್

Spread the love

ಬೆಂಗಳೂರು: ಯಾವಾಗಾದ್ರೂ ಸರಿ. ಚರ್ಚೆಗೆ ಸಮಯ ಫಿಕ್ಸ್​ ಮಾಡಿ. ನವೆಂಬರ್​ 1ರ ನಂತರ ಯಾವ ದಿನಾಂಕವಾದ್ರೂ ನಿಗದಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಒಪ್ಪಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ​ಕೂಡ ಬಹಿರಂಗ ಚರ್ಚೆಗೆ ಒಪ್ಪಿಗೆ ಸೂಚಿಸಿ ಸಮಯ ನಿಗದಿಪಡಿಸುವಂತೆ ಹೇಳಿದ್ದಾರೆ.

ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್​​ ಪಟಾಲಮ್​ನಿಂದ ರೈತರ ಪರಿಹಾರದಲ್ಲಿ ಲೂಟಿ ಎಂಬ ಹೆಚ್​​ಡಿಕೆ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು. “ಎನೀ ಟೈಮ್​ ಚರ್ಚೆಗೆ ಟೈಮ್​ ಫಿಕ್ಸ್​ ಮಾಡಿ. ನವೆಂಬರ್​ 1ರ ನಂತರ ದಿನಾಂಕ ನಿಗದಿಪಡಿಸಿ. ನಾನು ಏನು ಮಾಡಿದ್ದೇನೆ, ಅವರೇನು ಮಾಡಿದ್ದಾರೆ ಅನ್ನೋದನ್ನು ಅಲ್ಲೇ ಬಿಚ್ಚಿ ಮಾತಾಡೋಣ. ಗಾಳಿಯಲ್ಲಿ ಗುಂಡು ಹೊಡೆಯೋದು, ಹಿಟ್​ ಆಂಡ್​ ರನ್​ ಮಾಡೋದಲ್ಲ” ಎಂದು ಕಿಡಿಕಾರಿದರು. ಸಮಯ ಫಿಕ್ಸ್​ ಮಾಡಿ. ಅಲ್ಲಿ ಬಂದು ಎಲ್ಲವನ್ನೂ ಮಾತಾಡೋಣ ಎಂದು ಹೇಳಿ ಹೆಚ್​ಡಿಕೆ ಅವರ ಬೇರೆ ಯಾವುದೇ ಆರೋಪಗಳಿಗೆ ಪ್ರತಿಕ್ರಿಯಿಸದೇ ಹೊರಟು ಹೋದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ