Breaking News

ಹುಲಿ ಉಗುರು ಮಾದರಿ ಪೆಂಡೆಂಟ್‌ ಪ್ರಕರಣ: ತಲೆತಗ್ಗಿಸುವ ಯಾವ ಕೆಲಸವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ ಎಂದ ನಟ ಜಗ್ಗೇಶ್

Spread the love

ಬೆಂಗಳೂರು: ಹುಲಿ ಉಗುರಿನ ಮಾದರಿ ಪೆಂಡೆಂಟ್‌ ಹೊಂದಿರುವ ಆರೋಪದ ಮೇಲೆ ನಟ ದರ್ಶನ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಅರಣ್ಯ ಅಧಿಕಾರಿಗಳು ಬುಧವಾರ ಶೋಧ ಕಾರ್ಯಾಚರಣೆ ನಡೆಸಿದರು.

ಆ ಬಳಿಕ ಪ್ರಕರಣ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ತಾವು ಧರಿಸುವ ಲಾಕೆಟ್ ನಮ್ಮ ತಾಯಿ ಕೊಟ್ಟಿರುವ ಕಾಣಿಕೆಯಾಗಿದ್ದು, ಅದನ್ನು ಅಧಿಕಾರಿಗಳಿಗೆ ಒಪ್ಪಿಸಿರುವುದಾಗಿ ಬರೆದುಕೊಂಡಿದ್ದಾರೆ.

 

 

“ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತುವನ್ನು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದಗಳು. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ ಮಾಡೋದು ಇಲ್ಲ” ಎಂದು ಜಗ್ಗೇಶ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

“ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000 ಜನ ಇದ್ದರೆ, ವಿಷಯವಿಲ್ಲದೆ ದ್ವೇಷ ಮಾಡುವ 100 ಜನರೂ ಇದ್ದೆ ಇರುತ್ತಾರೆ. But remember one thing ಒಳ್ಳೆಯ ಗುಣ ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರು ಕಾಯಲು ದೇವರು ಒಬ್ಬ ಬರುತ್ತಾನೆ. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶವಾಗುತ್ತಾರೆ” ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

 


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ