ರಾಯಚೂರು: ಇಲ್ಲಿನ ಲಿಂಗಸುಗೂರು (Lingasaguu Taluku) ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.
ಹಟ್ಟಿ ಚಿನ್ನದಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಮಂಜುಳಾ (45) ಅಂತ ಗುರುತಿಸಲಾಗಿದೆ. ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನೀಷಿಯನ್ ಆಗಿದ್ದ ಮಂಜುಳಾ ಸಾವನ್ನಪ್ಪಿದ್ದಾರೆ.
ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಅಂತ ಶಂಕಿಸಲಾಗಿದೆ. ಮಂಜುಳಾ ಮನೆಯಿಂದ ಸ್ವಲ್ಪ ದೂರದಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿದಾಗ ಇನ್ನೂ ಬೆಂಕಿ ಹೊತ್ತಿ ಉರಿಯುತ್ತಿತ್ತು.
ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ನಿಖರ ಮಾಹಿತಿ ತಿಳಿದುಬರಲಿದೆ.
Laxmi News 24×7