Breaking News

ನವಿಲು ಭೇಟೆಯಾಡಿ ಮಾಂಸ ಭಕ್ಷಣೆ; ಒಡಿಶಾ ಮೂಲದ ಮೂವರ ಬಂಧನ

Spread the love

ತುಮಕೂರು: ರಾಜ್ಯಾದ್ಯಂತ ಹುಲಿ ಉಗುರಿನ ಪೆಂಡೆಂಟ್ ಪ್ರಕರಣದ ಸದ್ದು ಜೋರಾಗಿರುವ ಬೆನ್ನಲ್ಲೇ ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲು ಮಾಂಸ ಭಕ್ಷಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರನಾಯಕನಪಾಳ್ಯದ ಬಳಿಯ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಬಿಟ್ಟಿಂಗ್ ನಾಯಕ್, ಬೈಷಾಕ್‌ದಾವು, ದುಬಾ ಕಾಪತ್ ಬಂಧಿತರು. ಇವರು ಅನೇಕ ದಿನಗಳಿಂದ ನವಿಲುಗಳನ್ನು ಕೊಂದು ಭಕ್ಷಿಸುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು, 1.5 ಕೆಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ, ನವಿಲು ಹಿಡಿಯಲು ಬಳಸಿದ್ದ ಬಲೆಗಳು, ಉರುಳುಗಳು ಹಾಗು ಮಾಂಸ ಬೇಯಿಸಿದ್ದ ಪಾತ್ರೆಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಮಾಂಸವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ