ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.

Spread the love

ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು.

ಇದರಲ್ಲಿ ಪ್ರಾದೇಶಿಕ ನ್ಯಾಯವನ್ನು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗದವರಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಸಿಎಂ ಮಾತನಾಡಿದರು. ಈ ವೇಳೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಪ್ರಸ್ತಾಪ ಮಾಡಿದರು.

ಈ ಬಾರಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎರಡು ದಿ‌ನಗಳಲ್ಲಿ ಪ್ರಶಸ್ತಿ ಪಟ್ಟಿ ಪ್ರಕಟ: ಇದೇ ವೇಳೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಈ ಬಾರಿ 68 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡಲಾಗುವುದು. ಹಾಗೆ ಕನ್ನಡ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ಸಂಭ್ರಮ 50 ವರ್ಷ ಎಂಬ 10 ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಶಸ್ತಿಗಾಗಿ 26,555 ಶಿಫಾರಸು ಪತ್ರ : 2023ರಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಬರೋಬ್ಬರಿ 26,555 ಶಿಫಾರಸು ಪತ್ರಗಳು ಬಂದಿವೆ. ಆನ್​ಲೈನ್ ಮೂಲಕ, ಆಫ್​ ಲೈನ್ ಮೂಲಕ ಬರೋಬ್ಬರಿ 26,555 ಶಿಫಾರಸು ಪತ್ರಗಳು ಬಂದಿವೆ ಎಂದು ಸಚಿವ ತಂಗಡಗಿ ತಿಳಿಸಿದ್ದಾರೆ. ಅಂತಿ‌ಮ‌ ಪ್ರಶಸ್ತಿ ಪಟ್ಟಿಯನ್ನು ಎರಡು ದಿನಗಳಲ್ಲಿ ಪ್ರಕಟಿಸಲಾಗುವುದು‌ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ 3,523 ಅರ್ಜಿ‌ ಬಂದಿದೆ. ಒಟ್ಟು 26,555 ಶಿಫಾರಸು ಪತ್ರ ಬಂದಿವೆ. ಇದರಲ್ಲಿ ಶಾರ್ಟ್ ಲಿಸ್ಟ್ ಮಾಡಿ ಸಮಿತಿ ಸಾಧಕರ ಪಟ್ಟಿ ನೀಡಿದೆ‌ ಎಂದು ತಿಳಿಸಿದರು.


Spread the love

About Laxminews 24x7

Check Also

ನಾಳೆ ಕೇಂದ್ರ ಸರ್ಕಾರದ ಬಜೆಟ್‌ ಮಂಡನೆ

Spread the love ನವದೆಹಲಿ: ಜುಲೈ 23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿರುವ ಕೇಂದ್ರ ಬಜೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ