Breaking News

ಬಿ.ಎಸ್​.ಯಡಿಯೂರಪ್ಪಗೆ ‘Z​’ ಶ್ರೇಣಿಯ ಭದ್ರತೆ: ಶೀಘ್ರವೇ ಸಿಆರ್​ಪಿಎಫ್​ ಕಮಾಂಡೋ ಸೆಕ್ಯೂರಿಟಿ

Spread the love

ನವದೆಹಲಿ: ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಕೇಂದ್ರೀಯ ಮೀಸಲು ಪೊಲೀಸ್​ ಪಡೆಯ (ಸಿಆರ್​ಪಿಎಫ್​) ಸಿಬ್ಬಂದಿಯನ್ನು ಒಳಗೊಂಡಿರುವ ‘ಝೆಡ್​’ ಶ್ರೇಣಿಯ ಭದ್ರತೆ ಕಲ್ಪಿಸಿ ಕೇಂದ್ರ ಗೃಹ ಸಚಿವಾಲಯ ಗುರುವಾರ ಆದೇಶಿಸಿದೆ. ಕರ್ನಾಟಕದಲ್ಲಿ ಮಾತ್ರವೇ ಉನ್ನತ ಭದ್ರತೆಯ ಸೌಲಭ್ಯವನ್ನು ಬಿಎಸ್​ವೈ ಹೊಂದಿರಲಿದ್ದು, ಸಿಆರ್​ಪಿಎಫ್​ ಸಿಬ್ಬಂದಿ ಶೀಘ್ರವೇ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರಿಗೆ ಬೆದರಿಕೆ ಇರುವ ಕುರಿತ ಮಾಹಿತಿಯನ್ನು ಗುಪ್ತಚರ ವಿಭಾಗವು ಕೇಂದ್ರ ಗೃಹ ಇಲಾಖೆಯೊಂದಿಗೆ ಹಂಚಿಕೊಂಡಿದೆ. ಇದರ ಆಧಾರದ ಮೇಲೆ ಕೇಂದ್ರದ ಭದ್ರತೆ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ. ”ಕರ್ನಾಟಕದಲ್ಲಿ ಮೂಲಭೂತವಾದಿ ಗುಂಪುಗಳಿಂದ ಯಡಿಯೂರಪ್ಪ ಅಪಾಯ ಎದುರಿಸುತ್ತಿದ್ದಾರೆ. ಕರ್ನಾಟಕದಲ್ಲಿ ಅವರು ಸಂಚರಿಸುವ ಎಲ್ಲೆಡೆಯೂ ಸಿಆರ್​ಪಿಎಫ್​ ಕಮಾಂಡೋಗಳು ಭದ್ರತೆ ಒದಗಿಸಲಿದ್ದಾರೆ” ಎಂದು ಮೂಲಗಳು ತಿಳಿಸಿದೆ.

 

 

ಕರ್ನಾಟಕದ ಕಾಂಗ್ರೆಸ್​ ಸರ್ಕಾರದ ವೈಫಲ್ಯಗಳನ್ನು ಜನತೆಯೆದುರು ಎತ್ತಿ ತೋರಿಸಲು ಹಾಗೂ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶೀಘ್ರವೇ ಪಕ್ಷದ ಇತರೆ ನಾಯಕರೊಂದಿಗೆ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಇತ್ತೀಚೆಗೆ ಬಿಎಸ್​ವೈ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ, ಭದ್ರತೆ ಹಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

ರಾಜ್ಯದ ಪ್ರಬಲ ಲಿಂಗಾಯತ ಸಮುದಾಯದ ನಾಯಕ ಯಡಿಯೂರಪ್ಪ ಕಳೆದ ಐದು ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿರುವ ಅವರು, ಮೇನಲ್ಲಿ ನಡೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಚುನಾವಣಾ ನಿವೃತ್ತಿ ಪ್ರಕಟಿಸಿದ್ದರು. ಆದರೆ, ಬಿಜೆಪಿ ಹಾಗೂ ರಾಜ್ಯ ರಾಜಕಾಣರಣದಲ್ಲಿ ಸಕ್ರಿಯವಾಗಿ ತೊಡಿಸಿಕೊಂಡು, ಸದ್ಯ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿ ರಾಷ್ಟ್ರ ರಾಜಕಾರಣಕ್ಕೂ ಪ್ರವೇಶಿಸಿದ್ದಾರೆ.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ