Breaking News
Home / ರಾಜಕೀಯ / ಗ್ರೂಪ್ ಸಿ ಹುದ್ದೆಗಳಿಗೆ ನವೆಂಬರ್ 4, 5 ರಂದು ಪರೀಕ್ಷೆ: ಕೆಪಿಎಸ್​​ಸಿ

ಗ್ರೂಪ್ ಸಿ ಹುದ್ದೆಗಳಿಗೆ ನವೆಂಬರ್ 4, 5 ರಂದು ಪರೀಕ್ಷೆ: ಕೆಪಿಎಸ್​​ಸಿ

Spread the love

ಬೆಂಗಳೂರು: ಕೆಪಿಎಸ್​​ಸಿ ಅಧಿಸೂಚಿಸಲಾದ ಗ್ರೂಪ್ ‘ಸಿ’ ಹುದ್ದೆಗಳಿಗೆ ನ.4 ಮತ್ತು 5 ರಂದು ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳ ಹಾಲ್ ​ಟಿಕೆಟ್​ಗಳು ಈಗಾಗಲೇ ಆಯೋಗದ ವೆಬ್​ಸೈಟ್​ನಲ್ಲಿ ಲಭ್ಯ ಇವೆ. ಲೆಕ್ಕ ಸಹಾಯಕರು ಮತ್ತು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಒಂದೇ ಪರೀಕ್ಷೆ ಇರಲಿದೆ ಎಂದು ಕೆಪಿಎಸ್​ಸಿ ತಿಳಿಸಿದೆ.

ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯು ಸಚಿವ ಪ್ರಿಯಾಂಕ ಖರ್ಗೆಗೆ ಪತ್ರ ಬರೆದು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 242 (RPC) ಮತ್ತು ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರ 47 (RPC) ಹುದ್ದೆಗಳಿಗೆ ಸಾಮಾನ್ಯ ಪಠ್ಯ ಕ್ರಮ ಇರುವುದರಿಂದ ಎರಡೂ ಹುದ್ದೆಗಳನ್ನು ಸೇರಿಸಿ ಒಂದೇ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸದರಿ ಪರೀಕ್ಷಾ ಫಲಿತಾಂಶವನ್ನು ಎರಡೂ ಹುದ್ದೆಗಳಿಗೆ ಪರಿಗಣಿಸುವುದರಿಂದ ಅರ್ಜಿ ಸಲ್ಲಿಸಿರುವ ಯಾವುದೇ ಅಭ್ಯರ್ಥಿಗಳಿಗೆ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಆಯೋಗ ಮಾರ್ಚ್ 2023ರಲ್ಲಿ ಅಧಿಸೂಚಿಸಲಾದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 242 (RPC) ಮತ್ತು ಕಿರಿಯ ಲೆಕ್ಕ ಸಹಾಯಕರು 67 (RPC), ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರ 47 (RPC) ಮತ್ತು ಸಹಕಾರ ಸಂಘಗಳ ನಿರೀಕ್ಷಕರ 53 (ಹೈ.ಕ) ಹುದ್ದೆಗಳಿಗೆ ಮುಂದಿನ ತಿಂಗಳು ನವೆಂಬರ್ 4 ರಂದು ಕನ್ನಡ ಭಾಷಾ ಪರೀಕ್ಷೆ ಹಾಗೂ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು 242 (RPC), ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರ 47 (RPC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನವೆಂಬರ್ 5 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಸಂಬಂಧ ವೇಳಾಪಟ್ಟಿಯನ್ನು ಮೂರು ತಿಂಗಳ ಹಿಂದೆ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿತ್ತು.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರು ಮತ್ತು ಸಹಕಾರ ಇಲಾಖೆಯಲ್ಲಿನ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳ ಪರೀಕ್ಷೆಗಳಿಗೆ ಒಂದೇ ಪಠ್ಯ ಇರುವುದರಿಂದ ಎರಡೂ ಹುದ್ದೆಗಳನ್ನು ಸೇರಿಸಿ ಒಂದೇ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಸದರಿ ಪರೀಕ್ಷಾ ಫಲಿತಾಂಶವನ್ನು ಎರಡೂ ಹುದ್ದೆಗಳಿಗೆ ಪರಿಗಣಿಸುವುದರಿಂದ ಅರ್ಜಿ ಸಲ್ಲಿಸಿರುವ ಯಾವುದೇ ಅಭ್ಯರ್ಥಿಗಳಿಗೆ ಅನ್ಯಾಯವಾಗುವುದಿಲ್ಲ. ಆದ್ದರಿಂದ ನಿಗದಿತ ದಿನಾಂಕಗಳಂದು ಮೇಲ್ಕಂಡ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕ ಸಹಾಯಕರ 242 ಹುದ್ದೆಗಳ ನೇಮಕಾತಿಗಾಗಿ ಮಾರ್ಚ್​ 23 ರಿಂದ ಏಪ್ರಿಲ್​ 23ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. kpsc.kar.nic.in ಜಾಲತಾಣಕ್ಕೆ ಅಭ್ಯರ್ಥಿಗಳು ಭೇಟಿ ನೀಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಕಾಂ, ಬಿಬಿಎ ಅಥವಾ ಬಿಬಿಎಂನಲ್ಲಿ ಪದವಿ ಪೂರ್ಣಗೊಳಿಸಿರಬೇಕು.


Spread the love

About Laxminews 24x7

Check Also

ಮೊಸಳೆಗಳಿವೆ ಎಚ್ಚರಿಕೆ!

Spread the love ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ