Breaking News

ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

Spread the love

ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ ಎಂದು ಎಸಿಎಫ್​ ಮೋಹನ್​ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿನ ಶಾಖಾದ್ರಿ ಗೌಸ್​ ಮೋಯಿದ್ದೀನ್​ ಅವರ ಮನೆಯಲ್ಲಿ ಅಧಿಕಾರಿಗಳು ಶುಕ್ರವಾರ ಪರಿಶೀಲನೆ ಕೈಗೊಂಡಿದ್ದರು. ಆದರೆ, ಈ ವೇಳೆ ಶಾಖಾದ್ರಿ ಮನೆಯಲ್ಲಿ ಇರಲಿಲ್ಲ. ಮನೆಯ ಬಾಗಿಲು ಲಾಕ್​ ಆಗಿದ್ದ ಕಾರಣ 10 ಗಂಟೆಗೂ ಅಧಿಕ ಕಾಲ ಕಾದು ಕುಳಿತ ಅಧಿಕಾರಿಗಳು ಸಂಬಂಧಿಕರೊಬ್ಬರ ಮೂಲಕ ಮನೆಯ ಕೀ ತರಿಸಿಕೊಂಡಿದ್ದರು. ಬೆಂಗಳೂರಿನಿಂದ ಬಂದ ಬಸ್​ನಲ್ಲಿ ಕೀ ತರಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮನೆಯ ಕೀ ಬಂದ ಬಳಿಕ ಶಾಖಾದ್ರಿ ಅನುಪಸ್ಥಿತಿಯಲ್ಲಿ, ಅವರ ಸಂಬಂಧಿಕರ ಸಮ್ಮುಖದಲ್ಲಿ ಮನೆ ತಪಾಸಣೆ ನಡೆಸಲಾಗಿದೆ. ಈ ವೇಳೆ ಮನೆಯಲ್ಲಿ ಒಂದು ಚಿರತೆ ಹಾಗೂ ಒಂದು ಜಿಂಕೆ ಚರ್ಮ ಪತ್ತೆಯಾಗಿದೆ. ಎರಡು ಪ್ರಾಣಿಯ ಚರ್ಮವನ್ನು ವಶಕ್ಕೆ ಪಡೆದಿದ್ದು, ಎಫ್.ಎಸ್.ಎಲ್. ವರದಿಗೆ ಚರ್ಮವನ್ನು ಕಳುಹಿಸಲಾಗುವುದು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡುತ್ತೇವೆ. ಬಳಿಕ ಮುಂದಿನ ತನಿಖೆ ಕೈಗೊಳ್ಳಲಾಗುವುದು. ಅವರ ಮನೆಯಲ್ಲಿ ಯಾವುದೇ ರೀತಿಯ ಹುಲಿ ಚರ್ಮ ದೊರಕಿಲ್ಲ ಎಂದು ಎಸಿಎಫ್​ ಮೋಹನ್​ ತಿಳಿಸಿದ್ದಾರೆ.

ಚಿಕ್ಕಮಗಳೂರು ಆರ್​​ಎಫ್​ಒ ಮೋಹನ್ ಅವರ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆದಿದೆ. ಎಲ್ಲದರ ಬಗ್ಗೆ ನಾವು ವಿಚಾರಣೆ ಮಾಡುತ್ತೇವೆ ಎಂದು ಅಧಿಕಾರಿ ತಿಳಿಸಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ