Breaking News
Home / Uncategorized / ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Spread the love

ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಹೈದರಾಬಾದ್​ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು ತಿಳಿಸಿದರು.

ಅನಗತ್ಯ ಹೇಳಿಕೆ ಕೊಟ್ಟರೆ ನೊಟೀಸ್: ಪಕ್ಷದ ಶಾಸಕರು ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಧಿಕಾರದ ಬಗ್ಗೆ ಮಾಧ್ಯಮಗಳ ಮುಂದೆ ಅನಗತ್ಯ ಹೇಳಿಕೆ ನೀಡಬಾರದು ಎಂದು ಮನವಿ ಹಾಗೂ ಎಚ್ಚರಿಕೆ ನೀಡುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೇ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಕರ್ನಾಟಕದ ಎರಡನೇ ರಾಜಧಾನಿಯಾಗಲಿಬೆಳಗಾವಿ

Spread the love ಬೆಳಗಾವಿ: ನಗರದ ಎಸ್‌. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಯಿ ಭುವನೇಶ್ವರಿ, ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಕೇಶಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ