Breaking News

ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ.

Spread the love

ಕಲಬುರಗಿ: ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ.

ಇಂದು ಕರ್ನಾಟಕ ಪರೀಕ್ಷಾ ಪರಿಷತ್ ನಡೆಸಿದ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ​ ಬಂಧಿಸಿದ್ದಾರೆ.

ಕಲಬುರಗಿ ನಗರದ ಶ್ರೀಶರಣ ಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರಿಮೂರ್ತಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ಆರೋಪಿ ತ್ರೀಮೂರ್ತಿಯನ್ನು ಇಎನ್​ಟಿ ವೈದ್ಯರ ಬಳಿ ಕರೆದೊಯ್ದು ತಪಾಸಣೆ ಕೂಡಾ ನಡೆಸಲಾಗಿದೆ. ಇಂದು ನಡೆದ ಕನ್ನಡ- ಇಂಗ್ಲಿಷ್ ಕಮ್ಯುನಿಕೇಷನ್ ಪರೀಕ್ಷೆಯಲ್ಲಿ ಈತ ಅಕ್ರಮ ಎಸಗಿದ್ದಾನೆ.

ಇನ್ನೋರ್ವ ಅಭ್ಯರ್ಥಿ ಅಭಿಷೇಕ ಎಂಬಾತನನ್ನು ಕೂಡಾ ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅಫಜಪುರ ಪಟ್ಟಣ ಮಾಹಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ಅಭ್ಯರ್ಥಿಗಳು ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಹತ್ತಿರ ಕಾರು ಒಂದರಲ್ಲಿ ಕುಳಿತು ಬ್ಲೂಟೂತ್ ಮುಖಾಂತರ ಅಭ್ಯರ್ಥಿಗಳಿಗೆ ಕೀ ಉತ್ತರ ಹೇಳುತ್ತಿರುವುದನ್ನು ಗಮನಿಸಿದ ಪೊಲೀಸರು ಉತ್ತರ ಹೇಳಿ ಕೊಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಾತ್ರವಲ್ಲದೆ ಅವರು ಕೊಟ್ಟ ಮಾಹಿತಿ ಅನ್ವಯ ಇನ್ನೂ ಇಬ್ಬರು ಪರೀಕ್ಷಾ ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ ಹಾಗೂ ಅಫಜಲಪುರನಲ್ಲಿ ಸಿಕ್ಕಿಬಿದ್ದ ಬಹುತೇಕರು ಅಫಜಲಪುರ ತಾಲೂಕಿನ ಸೊನ್ನ ಗ್ರಾಮದವರು ಎನ್ನಲಾಗುತ್ತಿದೆ. ಪಿಎಸ್‌ಐ ಪರೀಕ್ಷೆ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಕೂಡಾ ಇದೇ ಗ್ರಾಮದವರಾಗಿದ್ದಾರೆ. ಅಕ್ರಮದ ಹಿಂದೆ ದೊಡ್ಡ ಜಾಲದ ಶಂಕೆ ವ್ಯಕ್ತವಾಗಿದೆ. 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಹಗಣರದಲ್ಲಿ ಕಲಬುರಗಿ ರಾಜ್ಯದಾದ್ಯಂತ ಬಾರಿ ಸದ್ದು ಮಾಡಿತ್ತು. ಸಿಐಡಿ ಪೊಲೀಸರು ಕೂಲಂಕುಶವಾಗಿ ತನಿಖೆ ನಡೆಸಿ 54ಕ್ಕೂ ಅಧಿಕ ಜನರನ್ನು ಕೂಡಾ ಬಂಧಿಸಿದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಇದೀಗ ಕರ್ನಾಟಕ ಪರೀಕ್ಷಾ ಪರಿಷತ್ ನಡೆಸುತ್ತಿರುವ ವಿವಿಧ ನಿಗಮಗಳ 750 ಹುದ್ದೆಗಳಿಗೆ ಪರಿಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ