Breaking News

ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಭೇಟಿಯಾದ ನಿಖಿಲ್​ ಕುಮಾರಸ್ವಾಮಿ.. ಮೈತ್ರಿ ಮಾತುಕತೆಯಲ್ಲೇನಿತ್ತು?

Spread the love

ಬೆಂಗಳೂರು: ಮುಂಬರುವ 2024ರ ಲೋಕಸಭೆ ಚುನಾವಣೆಗೆ ಇದಾಗಲೇ ಪಕ್ಷಗಳು ಕಸರತ್ತು ನಡೆಸುತ್ತಿದೆ. ನಿಮಗೆ ತಿಳಿದಿರುವಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ಜೆಡಿಎಸ್​ ನಾಯಕ ನಿಖಿಲ್ ಕುಮಾರಸ್ವಾಮಿ 2023 ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲುಂಡಿದ್ದರು.

ಆದರೆ ಇದೀಗ ಲೋಕಸಭೆ ಎಲೆಕ್ಷನ್​ ಗುರಿ ಸಾಧಿಸಲು ನಿಖಿಲ್​ ಪಣ ತೊಟ್ಟಿದ್ದಾರೆ.

ಹೌದು, ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ನಿಖಿಲ್​ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಭೇಟಿಯಾಗಿದ್ದಾರೆ. ಇವರ ಭೇಟಿ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಚುನಾವಣೆ ಹಿನ್ನೆಲೆ ಚುರುಕುಗೊಂಡಿರುವ ನಾಯಕ ನಟ ಈ ಹಿಂದೆ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಇಂದು ಯೋಗಿ ಆದಿತ್ಯನಾ​ಥ್ ಅವರನ್ನು ಭೇಟಿ ಮಾಡಿ ರಾಜಕೀಯ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಭೇಟಿ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಸಿಎಂ ಆದಿತ್ಯನಾಥ್​ ಅವರಿಗೆ ಶ್ರೀರಾಮ, ಸೀತೆ, ಲಕ್ಷ್ಮಣ, ಆಂಜನೇಯನಿರುವ ಒಂದು ವಿಗ್ರಹ ನೀಡಿ ಶಾಲು ಹೋದಿಸಿ ಗೌರವಿಸಿದ್ದಾರೆ.

 

 

ಈ ಕುರಿತು ಸ್ವತಃ ನಿಖಿಲ್​ ಕುಮಾರಸ್ವಾಮಿ ತಮ್ಮ ಎಕ್ಸ್​ ಖಾತೆಯಲ್ಲಿ ಫೋಟೋವನ್ನು ಪೋಸ್ಟ್​ ಮಾಡಿದ್ದಾರೆ. ಅಲ್ಲದೆ ಭೇಟಿ ಕುರಿತು ಬರೆದಿಕೊಂಡಿರುವ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ನಿಖಿಲ್​ ಎಕ್ಸ್​ ಪೋಸ್ಟ್​ ಹೀಗಿದೆ: “ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಯೋಗಿ ಆದಿತ್ಯನಾಥ್​ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ” ಎಂದು ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ