Breaking News

ಕೇವಲ ರಾಜಕೀಯ ಗಿಮಿಕ್ ಮಾಡಲು ಮರುನಾಮಕರಣ ಮಾಡೋದು ತಪ್ಪು: ಸಚಿವ ಶಿವಾನಂದ ಪಾಟೀಲ್

Spread the love

ವಿಜಯಪುರ: ಈವರೆಗೆ ಆಳಿದ ಯಾವುದೇ ಸರ್ಕಾರವಿರಲಿ, ಬಸವಣ್ಣನ ಜನ್ಮಭೂಮಿ ಬಗ್ಗೆ ಕಾಳಜಿ ವಹಿಸದಿರುವುದು ಬೇಸರ ತರಿಸಿದೆ.

ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರು, ಸಚಿವರು ಸೇರಿ ಗುದ್ದಾಡಿ ಅನುದಾನ ತರಬೇಕಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಎಂದು ಮರುನಾಮಕರಣ ಮಾಡುವ ವಿಚಾರ ಸಂಬಂಧ ಶನಿವಾರ ನಗರದಲ್ಲಿ ಮಾತನಾಡಿರುವ ಅವರು, ಬಸವೇಶ್ವರರ ಹೆಸರು ಈಗಾಗಲೇ ಪ್ರಚಲಿತದಲ್ಲಿದೆ. ಬಸವಣ್ಣನವರು ಹುಟ್ಟಿದ್ದು ಇದೇ ಜಿಲ್ಲೆಯಲ್ಲಿ ಎಂಬುದು ಇಡೀ ಜಗತ್ತಿಗೆ ಗೊತ್ತು. ಆದರೆ, ಬರಿ ಹೆಸರು ಬದಲಾವಣೆ ಮಾಡುವುದರಿಂದ ಅವರ ಹಿರಿಮೆ ಮತ್ತು ಗರಿಮೆ ಪರಿಚಯಿಸೋದು ಕಷ್ಟ. ಬಸವಣ್ಣನ ಕುರುಹು ಸಮಾಜಕ್ಕೆ ತಿಳಿಯಬೇಕಿದೆ. ಕೂಡಲಸಂಗಮ, ಬಸವ ಜನ್ಮಭೂಮಿಯೂ ಕೂಡ ಅಭಿವೃದ್ಧಿ ಆಗಿಲ್ಲ. ಅದರ ಕಡೆ ಗಮನ ಕೊಡಬೇಕೆಂದು ಒತ್ತಾಯಿಸಿದರು.

ನಾನು ಬಸವಣ್ಣನ ಅಭಿಮಾನಿ ಎಂದು ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರೆ ಅದು ಸಾಧನೆ ಆಗಲ್ಲ. ಯಾರೇ ಮುಖ್ಯಮಂತ್ರಿ ಆಗಲಿ, ಅವರ ಬಳಿ ಅಧಿಕಾರ, ಅವಕಾಶವಿದ್ದಾಗ ಬಸವಣ್ಣನ ಜನ್ಮಭೂಮಿ ಹಾಗೂ ಕರ್ಮ ಭೂಮಿ ಅಭಿವೃದ್ಧಿ ಮಾಡಬೇಕು. ಜಗತ್ತಿಗೆ ತೋರಿಸುವ ಕೆಲಸ ಬಸವಣ್ಣನವರ ಜನ್ಮ ಸ್ಥಳದಲ್ಲಿ ಆಗಬೇಕಿದೆ. ಮರುನಾಮಕರಣ ಈ ಸಂದರ್ಭದಲ್ಲಿ ಮಾಡೋದು, ಬಸವೇಶ್ವರರ ಹೆಸರು ಜಿಲ್ಲೆಗೆ ಇಟ್ಟಮೇಲೆ ಹೆಸರು ಹೇಳೋದು ಕಷ್ಟವಾಗುತ್ತೆ. ಹಾಗಾಗಿ ನನ್ನ ಅಭಿಪ್ರಾಯದಲ್ಲಿ ಜಿಲ್ಲೆಗೆ ಬಸವೇಶ್ವರ ಎಂದು ಮರುನಾಮಕರಣ ಮಾಡುವ ಅವಶ್ಯಕತೆ ಇಲ್ಲ. ಕೇವಲ ರಾಜಕೀಯ ಗಿಮಿಕ್ ಮಾಡಲು ಮರುನಾಮಕರಣ ಮಾಡೋದು ಕೂಡ ತಪ್ಪು ಎಂದರು.

ರಾಜ್ಯಕ್ಕೆ ಬಸವನಾಡು ಎಂದು ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ಕೂಡ ಸೂಕ್ತವಾದ ವಿಚಾರವಲ್ಲ. ಈ ರೀತಿಯ ರಾಜಕೀಯ ಗಿಮಿಕ್ ಮಾಡಬಾರದು. ಯಾರನ್ನೇ ಆಗಲಿ ರಾಷ್ಟ್ರೀಯ ಪುರುಷರನ್ನು ರಾಷ್ಟ್ರೀಯ ದೃಷ್ಟಿಕೋನದಿಂದಲೇ ನೋಡಬೇಕೆ ಹೊರತು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ನನಗೆ ಇದೊಂದು ರಾಜಕೀಯ ಅಭಾಸ ಎನಿಸುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆ ಈ ಮರುನಾಮಕರಣ ವಿಷಯ ಚರ್ಚೆಯಾಗುತ್ತಿದ್ದರೆ ಅದು ತಪ್ಪು. ನಮ್ಮವರೇ ಮಾಡಲಿ, ಬೇರೆ ಯಾರೇ ಮಾಡಲಿ ನಾನು ಮಾತ್ರ ಅದನ್ನು ಒಪ್ಪಿಕೊಳ್ಳೋದಿಲ್ಲ ಎಂದರು.

ಹೀಗೆ ಮುಂದುವರೆದರೆ ಬಸವಣ್ಣನವರ ಕರ್ಮಸ್ಥಾನ ಬೀದರ್​ನಲ್ಲಿದೆ ಅಂತ ನಾಳೆ ಬೀದರ್​ನವರು ಕೇಳಬಹುದು. ಇವೆಲ್ಲ ಒಂದಕ್ಕೊಂದು ಇತಿಹಾಸ ತಿರುಚುವ ಕೆಲಸ. ಈ ಪ್ರಯತ್ನಿಕ್ಕೆ ಕೈ ಹಾಕಬಾರದು. ಇತಿಹಾಸ ಕರೆಕ್ಟ್ ಆಗಿ ನಿರ್ಮಾಣ ಮಾಡುವಂತಹ ದಿಶೆಯಲ್ಲಿ ನಾವು ಕೆಲಸ ಮಾಡಬೇಕು. ಬಸವಣ್ಣನವರ ಕುರುಹು ಉಳಿಯುವಂತಹ ಕೆಲಸ ಮಾಡಬೇಕಿದೆ ಎಂದರು.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ