Breaking News
Home / ರಾಜಕೀಯ / ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ.: R.V.ದೇಶಪಾಂಡೆ

ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ.: R.V.ದೇಶಪಾಂಡೆ

Spread the love

ಕಾರವಾರ: “ರಾಜ್ಯವು ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಸರ್ಕಾರ ಬಹಳ ಸ್ಥಿರವಾಗಿದೆ.

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ, ಅದರರ್ಥ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಾರೆ ಎಂದಲ್ಲ” ಎಂದು ಕಾಂಗ್ರೆಸ್​ನ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಸಿಎಂ ಬದಲಾವಣೆ ಕುರಿತು ಕೆಲವು ಕಾಂಗ್ರೆಸ್​ ಶಾಸಕರು ನೀಡಿರುವ ಹೇಳಿಕೆಗೆ ಶನಿವಾರ ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಮನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಹೆಚ್​.ಸಿ.ಮಹದೇವಪ್ಪ ಭೇಟಿ ನೀಡಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿ, “ಕೆಲವರೆಲ್ಲ ಒಟ್ಟಿಗೆ ಸೇರಿ ಚರ್ಚೆ ಮಾಡಬಹುದು, ಇದು ಒಂದು ದೃಷ್ಟಿಯಲ್ಲಿ ಒಳ್ಳೆಯದೇ. ಚರ್ಚೆಗಳಿಂದ ಪಕ್ಷದ ಬೆಳವಣಿಗೆಗೆ ಒಳ್ಳೆಯ ಸಲಹೆಗಳು ಬರಬಹುದು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕನ್ನು ಅನುಷ್ಠಾನ ಮಾಡಿದೆ” ಎಂದರು.

“ಬಿಜೆಪಿ ಸರ್ಕಾರದ ನಂತರ ಆರ್ಥಿಕ ಸ್ಥಿತಿ ಸರಿಯಿರಲಿಲ್ಲ. ನಾವು ಅಧಿಕಾರಕ್ಕೆ ಬಂದಾಗ ಗ್ಯಾರಂಟಿಗಳಿಗೆ ಹೆಚ್ಚು ಹಣ ಮೀಸಲಿಡಬೇಕಾಯಿತು. ಹೀಗಾಗಿ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ. ಸಿಎಂ ಅಭಿವೃದ್ಧಿ ಕೆಲಸಗಳಿಗೆ ಹಣ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸರ್ಕಾರವನ್ನು ಬಲಪಡಿಸುವುದು ನಮ್ಮ ಕರ್ತವ್ಯ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕೆಲವು ಜನ ಊಹಪೋಹ ಸೃಷ್ಟಿಸುತ್ತಾರೆ, ಅದಕ್ಕೆ ನಾವು ಒತ್ತು ಕೊಡುವುದಿಲ್ಲ” ಎಂದು ಹೇಳಿದರು.

“ಯಾವುದೇ ಶಾಸಕರು ಆಪರೇಶನ್ ಕಮಲಕ್ಕೆ ಒಳಗಾಗುತ್ತಿರುವ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು. ಮುಂದಿನ ದಿನಗಳಲ್ಲಿ ನಿಮಗೆ ಸಚಿವ ಸ್ಥಾನ ಸಿಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅನೇಕ ಕಾರಣಗಳಿಂದ ಮಂತ್ರಿಗಳನ್ನು ಆಯ್ಕೆ ಮಾಡುತ್ತಾರೆ. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಬೇಸರವಿಲ್ಲ. ಜಿಲ್ಲೆ ಮತ್ತು ರಾಜ್ಯ ಅಭಿವೃದ್ಧಿಯಾಗಬೇಕು” ಎಂದು ತಿಳಿಸಿದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ