Breaking News

ಸತೀಶ್ ಜಾರಕಿಹೊಳಿ ಕೆಲ ಶಾಸಕರ ಜೊತೆ ದುಬೈಗೆ ಹೊರಟಿರೋ ವಿಚಾರ ನನಗೆ ಗೊತ್ತಿಲ್ಲ

Spread the love

ಧಾರವಾಡ: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಪಕ್ಷ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಿದೆ ಎಂಬ ವಿಚಾರಕ್ಕೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್​ ಕುಲಕರ್ಣಿ ಪ್ರತಿಕ್ರಿಯೆಸಿ, ನಾನು ಯಾವುದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೇಳಿಲ್ಲ.

ಕೊಟ್ಟರೆ ನೋಡೋಣ ಏನಾಗುತ್ತದೆ ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಹೊರವಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಅವರು ಕೆಲ ಶಾಸಕರ ಜೊತೆ ದುಬೈಗೆ ಹೊರಟಿರುವ ವಿಚಾರ ನನಗೆ ಗೊತ್ತಿಲ್ಲ, ನನಗಂತೂ ದೇಶ ಬಿಟ್ಟು ಹೋಗಲು ಬರುವುದಿಲ್ಲ. ನನಗೆ ಹೊರದೇಶಕ್ಕೆ ಹೋಗಲು ಅವಕಾಶವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಆಪರೇಷನ್​ ಕಮಲ ನಡೆಯುತ್ತಿದೆ ಎಂಬ ಶಾಸಕ ರವಿ ಗಣಿಗ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಖರೀದಿ ಮಾಡುತ್ತಿರಬಹುದು? ಹಿಂದಿನಿಂದ ಅದನ್ನೇ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಅದನ್ನೇ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದಲ್ಲಿ ಜನರಿಂದ ಗೆದ್ದು ಬಿಜೆಪಿಯವರು ರಾಜ್ಯದಲ್ಲಿ ಎಂದಿಗೂ ಆಡಳಿತಕ್ಕೆ ಬಂದಿಲ್ಲ. ಆದರೆ ಈ ಸಲ ನಮ್ಮ ರಾಜ್ಯದಲ್ಲಿ ಅದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ