Breaking News

ಕಾಂಗ್ರೆಸ್​ನಲ್ಲಿ ಅಧಿಕಾರಕ್ಕಾಗಿ ಒಳಜಗಳ ಶುರುವಾಗಿದ್ದು, ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the love

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದಿಂದ ರಾಜ್ಯದ ಜನ ಅಂತಂತ್ರವಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿಸಲು ಸಿಎಂ ಸಿದ್ದರಾಮಯ್ಯ ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಆರೋಪಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಬಿಟ್ಟು ಸಭೆ ಮಾಡುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ಇದು ರಾಜಕೀಯ ಹೈಡ್ರಾಮ, ಕಾಂಗ್ರೆಸಿನಲ್ಲಿ ನಿತ್ಯ ಭಿನ್ನಮತ ಹೆಚ್ಚಾಗುತ್ತಿದೆ. ಅಧಿಕಾರಕ್ಕಾಗಿ ಒಳಜಗಳ ನಡೆಯುತ್ತಿದೆ. ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ ಇದು ದೊಡ್ಡ ಡ್ರಾಮಾ. ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಗಳ ತಾರಕಕ್ಕೇರಿದೆ ಎಂದರು.

ಪಕ್ಷದಲ್ಲಿನ ಒಳಜಗಳ ಡೈವರ್ಟ್​ ಮಾಡಲು ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸರ್ಕಾರವನ್ನು ತೆಗೆಯಲು ಬಿಜೆಪಿ ಯಾವುದೇ ಚಿಂತನೆ ಮಾಡಿಲ್ಲ. ಜನರು ಕಾಂಗ್ರೆಸ್​ಗೆ ಅಧಿಕಾರ ಕೊಟ್ಟಿದ್ದಾರೆ. ಐದು ವರ್ಷ ನಡೆಸಲಿ. ಆದರೆ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಾಲಿಶ ಹೇಳಿಕೆ ನೀಡೋದನ್ನು ಬಿಡಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.

ಡಿಕೆಶಿ ಪ್ರಾಮುಖ್ಯತೆ ಕಡಿಮೆಗೊಳಿಸಲು ಯತ್ನ: ಐದಾರು ಸ್ಥಾನಗಳು ಕಡಿಮೆ ಇದ್ರೆ ಸರ್ಕಾರ ರಚನೆ ಬಗ್ಗೆ ಯೋಚನೆ ಮಾಡಬಹುದು.‌ ಆದ್ರೆ 70 ಶಾಸಕರನ್ನು ಕರೆದುಕೊಂಡು ಬಂದು ಸರ್ಕಾರ ರಚನೆ ಮಾಡಲು ಸಾಧ್ಯವಿದೆಯಾ ? ಡಿಕೆಶಿ ಪ್ರಾಮುಖ್ಯತೆ ಕಡಿಮೆ ಮಾಡಲು ಸಿದ್ದರಾಮಯ್ಯ ಡ್ರಾಮಾ ನಡೆಸಿದ್ದಾರೆ. ಮುಂದಿನ ಎರಡೂವರೆ ವರ್ಷದ ನಂತರ ಅಥವಾ ಲೋಕಸಭಾ ಚುನಾವಣೆ ಬಳಿಕ ಡಿಕೆಶಿಗೆ ಅಧಿಕಾರ ಬಿಟ್ಟುಕೊಡಬೇಕಂತ ಸಿದ್ದರಾಮಯ್ಯ ಈ ನಾಟಕ ನಡೆಸಿದ್ದಾರೆ ಎಂದು ಜೋಶಿ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ: ರೈತರಿಗೆ ನೆರವಾದ ‘ಕೃಷಿ ಸಿಂಚಾಯಿ’

Spread the love ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆಗೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023-24ರ ಸಾಲಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ