ಹಾವೇರಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪಕ್ಷದ ವಿಚಾರದಲ್ಲಿ, ಆಂತರಿಕ ವಿಚಾರದಲ್ಲಿ ಹೇಳಿಕೆ ನೀಡದಂತೆ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕುರಿತು ಮಾತನಾಡುವುದಿಲ್ಲಾ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಜಿಲ್ಲೆಯ ಹಾನಗಲ್ ತಾಲೂಕು ಸಾಂವಸಗಿ ಗ್ರಾಮದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷರು ಅಪ್ಪಣೆ ಏನಿದೆ ಅದನ್ನು ಚಾಚು ತಪ್ಪದೆ ನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು.
ಅವರು ನಮ್ಮ ಪಕ್ಷದ ಅಧ್ಯಕ್ಷರು. ಯಾರೇ ಆಗಲಿ ಮಾಧ್ಯಮಗಳಿಗೆ ಹೇಳಿಕೆ ಕೊಡುವುದರ ಬಗ್ಗೆ ಗೊತ್ತಿದೆ. ಈ ವಿಚಾರವಾಗಿ ಜಾಸ್ತಿ ಮಾತನಾಡದೆ ಅಧ್ಯಕ್ಷರ ಅಪ್ಪಣೆಯಂತೆ ನಡೆದುಕೊಳ್ಳುತ್ತೇವೆ. ಸಿಎಂ ಖುರ್ಚಿ ಬಗ್ಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ವಿಚಾರ ಕುರಿತಂತೆ ಮಾತನಾಡಿದ ಅವರು, ಆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು.
ಯಾರು ಮುಖ್ಯಮಂತ್ರಿಯಾದರು ಕೂಡಾ ನಾವು ಕೆಲಸ ಮಾಡುತ್ತೇವೆ. ಯಾರೇ ಸಿಎಂ ಆಗಲಿ, ನಮಗೆ ಅಭ್ಯಂತರ ಇಲ್ಲಾ. ಸಿಎಂ ಸಿದ್ದರಾಮಯ್ಯ ಸಾಹೇಬರು ಒಳ್ಳೆಯ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೈಕಮಾಂಡ್ ತೀರ್ಮಾನ ಏನಿದೆಯೋ ಅದಕ್ಕೆ 136 ಜನರು ಬದ್ಧರಾಗಿದ್ದೇವೆ. ನಮ್ಮ ಅಧ್ಯಕ್ಷರು ಕಟ್ಟಪ್ಪಣೆ ಮಾಡಿದ್ದಾರೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರು ನಾನು ಶಿಸ್ತಿನ ಸಿಪಾಯಿ ರೀತಿ ಇರುತ್ತೇನೆ. ಮುಂದೆ ಹುಲಿ ಉಗುರಿನ ವಿಚಾರದಲ್ಲಿ ರಾಜಕೀಯ ಮಾಡೋದು ಏನಿಲ್ಲಾ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.