Breaking News
Home / ರಾಜಕೀಯ / ನ.9 ರಿಂದ ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸದ‌ ಮುಂದೆ ರೈತರಿಂದ ಧರಣಿ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್​

ನ.9 ರಿಂದ ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸದ‌ ಮುಂದೆ ರೈತರಿಂದ ಧರಣಿ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್​

Spread the love

ಮೈಸೂರು : ಇನ್ನು ಹತ್ತು ದಿನದಲ್ಲಿ ರೈತರಿಗೆ ಕಬ್ಬಿನ ಹೆಚ್ಚುವರಿ ದರ ಕೊಡಿಸದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರ ಮೈಸೂರಿನ‌ ಮನೆಯ ಎದುರು ನ.9 ರಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘ ತೀರ್ಮಾನಿಸಿದೆ.

 

ನಗರದ ಪಿಡಿಡಬ್ಲ್ಯೂ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್​ ಮಾತನಾಡಿ, ರಾಜ್ಯ ಸರ್ಕಾರ ಹಿಂದಿನ ಸಾಲಿನಲ್ಲಿ ನಿಗದಿ ಮಾಡಿದ್ದ ಕಬ್ಬಿನ ಹೆಚ್ಚುವರಿ ದರ ಟನ್‌ಗೆ 150 ರೂ. ಕೊಡಿಸಲು, ಪ್ರಸಕ್ತ ಸಾಲಿನ ದರ ಏರಿಕೆ ಮಾಡಲು ಸರ್ಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಉತ್ಪಾದನಾ ವೆಚ್ಚ 3580 ರೂ. ಆದರೆ ಸರ್ಕಾರ 3150 ನಿಗದಿ ರೂ. ಮಾಡಿದೆ. ಕೂಡಲೇ ಪರಿಷ್ಕರಣೆ ಮಾಡಿ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಹತ್ತು ದಿನದ ಗಡುವಿನೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರದಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು. ಸರ್ಕಾರದ ಆದೇಶ ಧಿಕ್ಕರಿಸಿರುವ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ರೈತರ ಹಣ ಕೊಡಿಸಬೇಕು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಹದಗೆಡುವ ಮುನ್ನವೇ ರೈತರಿಗೆ ನ್ಯಾಯ ಕೊಡಿಸಬೇಕು ಎಚ್ಚರಿಕೆ ನೀಡಿದರು.

ಕಬ್ಬಿನ ಇಳುವರಿ ಹಾಗೂ ಪ್ರದೇಶ ಕಡಿಮೆಯಾಗಿದ್ದು, ಶೇ. 50ರಷ್ಟು ಉತ್ಪಾದನೆ ಬರಗಾಲದ ಕಾರಣ ಕಡಿಮೆಯಾಗಿದೆ. ರೈತರು ಕಬ್ಬು ಕಟಾವಿನ ಬಗ್ಗೆ ಆತಂಕಗೊಳ್ಳದೆ ಹೆಚ್ಚು ದರ ನಿಗದಿ ಮಾಡುವ ತನಕ ಹೋರಾಟಕ್ಕೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಕೃಷಿ ಪಂಪ್‌ಸೆಟ್​ಗಳಿಗೆ ವಿದ್ಯುತ್​ ಕಣ್ಣುಮುಚ್ಚಾಲೆ ಆಡುತ್ತಿರುವುದು ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಮರ್ಮಾಘಾತ ತಂದಿದೆ. ಮಳೆ ಕಡಿಮೆಯಾಗಿರುವುದು ವಿದ್ಯುತ್ ಉತ್ಪಾದನೆ ಕುಂಠಿತಕ್ಕೆ ಕಾರಣ. ಇದರಿಂದಾಗಿ ರೈತರಿಗೆ 5 ಗಂಟೆ ವಿದ್ಯುತ್ ಸಿಗುತ್ತಿದೆ ಎನ್ನುತ್ತಾರೆ. ಆದರೆ, ಕೈಗಾರಿಕೆಗೆ, ಇತರೆ ಉದ್ಯಮಕ್ಕೆ ಸಮರ್ಪಕ 24 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿದೆ. ಸರ್ಕಾರದ ಇಬ್ಬಗೆ ನೀತಿ ಸರಿ ಅಲ್ಲ ಎಂದು ಕುರುಬೂರು ಶಾಂತಕುಮಾರ್​ ಕಿಡಿಕಾರಿದರು.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ