Breaking News

ರಾಜ್ಯಾದ್ಯಂತ ವಿವಿಧ ಅಧಿಕಾರಿಗಳಿಗೆ ಲೋಕಾ ಶಾಕ್​: ಬೆಂಗಳೂರು ಸೇರಿ 90 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತೀವ್ರ ಶೋಧ ಕಾರ್ಯ..

Spread the love

ಬೆಂಗಳೂರು: ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಇಂದು (ಸೋಮವಾರ) ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಬರೋಬ್ಬರಿ 90 ಕಡೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯಕ್ಕೂ ಮೀರಿ ಅಧಿಕ ಗಳಿಕೆ, ಅಕ್ರಮ ಆಸ್ತಿ ಸಂಗ್ರಹಣೆ ಆರೋಪದಡಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.

ಬೆಂಗಳೂರಿನ 11 ಕಡೆ ಲೋಕಾ ದಾಳಿ: ಬೆಂಗಳೂರಿನ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್. ನಗರ ವಲಯಾಧಿಕಾರಿಗೆ ಸೇರಿದ ಕೆ.ಆರ್‌.ಪುರದಲ್ಲಿನ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿ, ಶೋಧ ನಡೆಸುತ್ತಿದ್ದಾರೆ. ಈ ಹಿಂದೆ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಇವರು ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದರು. ಅದರ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿ ಶೋಧ ಕಾರ್ಯ ಮುಂದುವರಿಸಿದೆ.

ಅಲ್ಲದೇ, ಕೈಗಾರಿಕಾ ಮತ್ತು ಸುರಕ್ಷತಾ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸದ್ಯ ದಾವಣಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯ ಬೆಂಗಳೂರಿನ ಉಪಕಾರ್ ಲೇಔಟ್, ಆಧ್ರಹಳ್ಳಿ ಹಾಗೂ ಚಾಮರಾಜನಗರದ ಕೊಳ್ಳೆಗಾಲದಲ್ಲಿರುವ ಮನೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲಿಸುತ್ತಿದ್ದಾರೆ


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ