Breaking News

ಸಿದ್ದರಾಮಯ್ಯ ನೇತೃತ್ವದಲ್ಲಿ 5 ವರ್ಷ ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

Spread the love

ಸಿದ್ದರಾಮಯ್ಯ ನೇತೃತ್ವದಲ್ಲಿ ಐದು 5 ಸರ್ಕಾರ ಸ್ಥಿರ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಗೋಕಾಕ : ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ 5 ವರ್ಷ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಇಲ್ಲ ಎಲ್ಲವೂ ಊಹಾಪೋಹ ಅಷ್ಟೇ ಎಂದು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸ್ಥಿರವಾಗಿರುತ್ತದೆ, ಯಾವುದೇ ಆಪರೇಷನ್ ಕಮಲ ನಡೆಯುತ್ತಿಲ್ಲ, ಇದು ಕೇವಲ ಡಿ ಕೆ ಶಿವಕುಮಾರ್ ಅವರ ಬಣದಿಂದ ಹಬ್ಬಿಸಿರುವ ಸುದ್ದಿಯಾಗಿದೆ ಎಂದರು.

ಅನುದಾನದ ಸಲುವಾಗಿ ಇದು ಹೈಕಮಾಂಡ್ ಗಮನ ಸೆಳೆಯಲು ಡಿಕೆಶಿ ಟೀಂ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯಿಂದ ಆಪರೇಷನ್‌ ಕಮಲ ನಡಿತಾ ಇಲ್ಲ. ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರಿಂದ ಹೈಕಮಾಂಡ್ ಗಮನ ಸೆಳೆಯಲು ಆಪರೇಷನ್‌ ಕಮಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ಸತೀಶ್ ಜಾರಕಿಹೊಳಿ ಕಾರ್ಯಕ್ಕೆ ಸಹೋದರ ಲಖನ ಜಾರಕಿಹೊಳಿ ಮೆಚ್ಚುಗೆ

ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ಕೆ ಲಖನ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,

ಲೋಕೋಪಯೋಗಿ ಇಲಾಖೆಯಲ್ಲಿ ಯಾವುದೇ ಕಮೀಷನ್ ಇಲ್ಲದೇ ಕಾರ್ಯ ನಡೆಯುತ್ತಿವೆ, ಸಿದ್ದರಾಮಯ್ಯ ನಂತರದಲ್ಲಿ ಸತೀಶ್ ಜಾರಕಿಹೊಳಿ ಅವರೇ ಅತ್ಯುತ್ತಮ ನಾಯಕರು, ಈ ಸರ್ಕಾರ ಬರುವಲ್ಲಿ ಸತೀಶ್ ಜಾರಕಿಹೊಳಿ ಅವರ ಪಾತ್ರ ಕೂಡ ಮಹತ್ವವಾಗಿದೆ.

 

 

https://www.facebook.com/share/p/Pi76nwHSEdjXkRWM/?mibextid=xfxF2i


Spread the love

About Laxminews 24x7

Check Also

ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದುವರೆಯುತ್ತಿದ್ದೇವೆ,

Spread the loveಚಾಮರಾಜನಗರ: “ಸಿಎಂ ಸ್ಥಾನ ಖಾಲಿಯಿಲ್ಲ, ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಐದು ವರ್ಷ ಮುಂದುವರಿಯುತ್ತೇವೆ” ಎಂದು ಅರಣ್ಯ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ