Breaking News

ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡುತ್ತಿದ್ದ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.

Spread the love

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕಾಡರಾಮನಹಳ್ಳಿಯಲ್ಲಿ ಮಾಂಸಕ್ಕಾಗಿ ಎಂಟು ಬಾವಲಿಗಳನ್ನು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಅರೆಸ್ಟ್ ಮಾಡಿದ್ದಾರೆ.

ಮಾಗಡಿ ತಾಲ್ಲೂಕಿನ ಹೊಂಬಾಳಮ್ಮಪೇಟೆಯ ನಿವಾಸಿಗಳಾದ ರಂಗನಾಥ, ರಾಮಕೃಷ್ಣ, ಶಿವಶಂಕರ ಹಾಗೂ ರಂಗನಾಥ ಎಂದು ಆರೋಪಿಗಳನ್ನು ಗುರುತಿಸಲಾಗಿದೆ.

ಆರೋಪಿಗಳು ಕಾಡರಾಮನಹಳ್ಳಿಯ ಜಮೀನೊಂದರಲ್ಲಿ 8 ಬಾವಲಿಗಳನ್ನು ಮಾಂಸಕ್ಕಾಗಿ ಬೇಟೆಯಾಡಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಬಾವಲಿಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಲ್ಲಿ ಸಾಮಾನ್ಯ ಕಾಗೆಗಳು, ಬಾವಲಿಗಳು ಹಾಗೂ ಇಲಿಗಳನ್ನು ಸಂರಕ್ಷಿತ ಪಟ್ಟಿ 2ರಡಿಯಲ್ಲಿ ತರಲಾಗಿದೆ. ಈ ತಿದ್ದುಪಡಿಯಂತೆ ಸಂರಕ್ಷಿತ ಪಟ್ಟಿಯಡಿಯಲ್ಲಿರುವ ಪ್ರಾಣಿಗಳನ್ನು ಕೊಂದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 25,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ನವಿಲು ಬೇಟೆ-ಒಡಿಶಾ ಮೂಲದ ಮೂವರು ಸೆರೆ: ಮಾಂಸಕ್ಕಾಗಿ ನವಿಲು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಇತ್ತೀಚೆಗೆ ತುಮಕೂರು ಜಿಲ್ಲೆಯ ಮಾರನಾಯಕಪಾಳ್ಯದಲ್ಲಿ ನಡೆದಿತ್ತು. ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಮೂವರು ಸೆರೆಯಾಗಿದ್ದರು. ಬಂಧಿತರನ್ನು ಬಿಟ್ಟಿಂಗ್​ ನಾಯಕ್​, ಬೈಷಾಕ್​ದಾವು ಮತ್ತು ದುಬಾ ಕಾಪತ್ ಎಂದು ಗುರುತಿಸಲಾಗಿದೆ.​


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ