Breaking News

ಹಳೆ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ವ್ಯಕ್ತಿ ಕೊಲೆ

Spread the love

ರಾಯಚೂರು : ಹಳೇ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಿ ವ್ಯಕ್ತಿಯೊಬ್ಬರನ್ನು ಬರ್ಬರ‌ವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರಬಣಕಲ್‌ ಗ್ರಾಮದ ಪ್ರಸಾದ್ (38) ಎಂದು ಗುರುತಿಸಲಾಗಿದೆ. ಬೆಳಗ್ಗೆ ಭತ್ತದ ಗದ್ದೆಗೆ ನೀರು ಕಟ್ಟಲು ತೆರಳಿದಾಗ ಏಕಾಏಕಿ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಪ್ರಸಾದ್​ ಅವರು ಜಮೀನಿಗೆ ನೀರು ಕಟ್ಟಲೆಂದು ಬೈಕ್​ನಲ್ಲಿ ತೆರಳಿದ್ದರು. ಈ ವೇಳೆ ಜಮೀನಿನ ಬಳಿ ಕಾದು ಕುಳಿತಿದ್ದ ಮೂವರು ದುಷ್ಕರ್ಮಿಗಳು ಏಕಾಏಕಿ ಪ್ರಸಾದ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ದಾಳಿ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಬಣಕಲ್ ಗ್ರಾಮದ ಮೂವರು ಹತ್ಯೆಗೈದಿರುವುದಾಗಿ ಆರೋಪಿಸಲಾಗಿದೆ.

ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹತ್ಯೆಯನ್ನು ಖಂಡಿಸಿ ದಲಿತ ಸಂಘಟನೆಗಳು ಮಾನ್ವಿ ತಾಲೂಕಿನ ಸರ್ಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದವು.


Spread the love

About Laxminews 24x7

Check Also

ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

Spread the love ಅಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ