Breaking News

ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ವಿದ್ಯುತ್, ಕುಡಿಯುವ ನೀರು ಉಚಿತ: ಸಿಎಂ ಸಿದ್ದರಾಮಯ್ಯ ಘೋಷಣೆ

Spread the love

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ಉಚಿತವಾಗಿ ವಿದ್ಯುತ್ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಓದಬೇಕು, ಕನಿಷ್ಠ ಎಸ್‌ಎಸ್‌ಎಲ್​ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಓದಬೇಕು ಎಂದು ಕರೆ ನೀಡಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿಂದು ಶಿಕ್ಷಣ ಇಲಾಖೆ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ರಾಜ್ಯ ಏಕೀಕರಣವಾದಾಗ ಮೈಸೂರು ರಾಜ್ಯ ಎಂದು ಕರೆಯಲಾಯಿತು. 1973 ರಲ್ಲಿ ಅಂದಿನ ಸಿಎಂ ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದರು. ಮರುನಾಮಕರಣಕ್ಕೆ 50 ವರ್ಷ ತುಂಬಿದೆ. ಇಡೀ ರಾಜ್ಯದಲ್ಲಿ ಒಂದು ವರ್ಷ ಕರ್ನಾಟಕ ಸಂಭ್ರಮ 50 ಹೆಸರಿನ ಮೂಲಕ ಕನ್ನಡದ ಇತಿಹಾಸ, ಸಂಸ್ಕೃತಿ, ಭಾಷೆ, ಕಲೆ, ಸಂಗೀತ, ಜನಪದ, ಸಂಪ್ರದಾಯವನ್ನು ರಾಜ್ಯದ ಉದ್ದಗಲಕ್ಕೆ ತಿಳಿಸುವ ಕೆಲಸ ಮಾಡಲಿದ್ದೇವೆ. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎನ್ನುವ ಘೋಷವಾಕ್ಯದೊಂದಿಗೆ ಇಡೀ ರಾಜ್ಯದಲ್ಲಿ ನಾವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಈ ವರ್ಷಕ್ಕೆ 50 ವರ್ಷದ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಹಿಂದಿನ ಸರ್ಕಾರ ಅದನ್ನು ಮಾಡಲಿಲ್ಲ. ಹಾಗಾಗಿ ನಾನು ಈ ವರ್ಷ ಸಂಭ್ರಮಾಚರಣೆಗೆ ಬಜೆಟ್​ನಲ್ಲಿ ಘೋಷಣೆ ಮಾಡಿದ್ದು, ಮುಂದಿನ ಒಂದು ವರ್ಷ ಈ ಕಾರ್ಯಕ್ರಮ ನಡೆಯಲಿದೆ. ಜನರನ್ನು ಜಾಗೃತಿ ಮಾಡುವ ಕೆಲಸ ಮಾಡಲಿದ್ದೇವೆ ಎಂದು ಸಿಎಂ ತಿಳಿಸಿದರು.

ನಾವೆಲ್ಲ ಕನ್ನಡ ಭಾಷೆಯಲ್ಲೇ ವ್ಯವಹಾರ ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡಿದ್ದೇವೆ. ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಎನ್ನುವ ಪ್ರತಿಜ್ಞೆ ಮಾಡಬೇಕು. ನಮ್ಮ ಭಾಷೆ, ನೆಲ, ಜಲ ಸಂಸ್ಕೃತಿ, ಕಲೆಗಳ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಅತಿ ಅವಶ್ಯಕ. ಕನ್ನಡ ಭಾಷೆ ನಮ್ಮ ತಾಯಿ ಭಾಷೆ, ಈ ನೆಲದ ಋಣ ತೀರಿಸಬೇಕಾದಲ್ಲಿ ನೆಲ, ಜಲ, ಭಾಷೆ ಸಂಸ್ಕೃತಿ ಎತ್ತಿ ಹಿಡಿಯುವ ಪ್ರತಿಜ್ಞೆಯನ್ನು ಎಲ್ಲ ಕನ್ನಡಿಗರು ಮಾಡಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ