Breaking News

ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಮುಂದುವರೆದ ಕಾರ್ಯಾಚರಣೆ

Spread the love

ಬೆಂಗಳೂರು: ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ಸೋಮವಾರ ಕಾಣಿಸಿಕೊಂಡ ಚಿರತೆ, ಈವರೆಗೆ ಅಧಿಕಾರಿಗಳ ಕಣ್ಣಿಗೆ ಬಿದ್ದಿಲ್ಲ.

ಪರಿಣಾಮ ಜನರು ಭಯದಲ್ಲಿಯೇ ಓಡಾಡುಂತಾಗಿದೆ. ಸೆರೆಗಾಗಿ ಎರಡು ಬೋನುಗಳನ್ನು ಇಟ್ಟಿರುವ ಅರಣ್ಯ ಇಲಾಖೆ ಐದು ತಂಡಗಳನ್ನು ನಿಯೋಜಿಸಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಕಡೆಂಜಾ ಅಪಾರ್ಟ್​ಮೆಂಟ್​ ಸಮೀಪ ಚಿರತೆ ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಆದರೆ, ಚಿರತೆ ಮಾತ್ರ ಅಧಿಕಾರಿಗಳ ತಪ್ಪಿಸಿಕೊಂಡು ಓಡಾಡುತ್ತಿದೆ.

ಮೈಸೂರಿನಿಂದ ವಿಶೇಷ ತಂಡ ಸೇರಿದಂತೆ ಬನ್ನೇರುಘಟ್ಟದ ಅರವಳಿಕೆ ತಜ್ಞರು ಕೂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೂ, ಸಹ ಚಿರತೆ ಪತ್ತೆಯಾಗಿಲ್ಲ. ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್​​ ಲೇಔಟ್​ನ ಪಾಳು ಬಿದ್ದ ಕಟ್ಟಡದಲ್ಲಿ ಚಿರತೆಯ ಜಾಡು ಪತ್ತೆಯಾಗಿದ್ದು ಬೆಳಗ್ಗೆಯಿಂದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಆದರೆ, ಈ ಕಟ್ಟಡದಲ್ಲಿಲ್ಲ ಎಂದು ಖಚಿತಪಡಿಸಿಕೊಂಡ ಅಧಿಕಾರಿಗಳು, ಸದ್ಯಕ್ಕೆ ಬೋನನ್ನು ಅಳವಡಿಸಿ ಅಲ್ಲಿಂದ ಬೇರೆಡೆಗೆ ಕಾರ್ಯಚರಣೆಯನ್ನು ಶಿಫ್ಟ್ ಮಾಡಿದ್ದಾರೆ.

“ಬೆಳಗ್ಗಿನ ಸಮಯದಲ್ಲಿ ಓಡಾಡಲು ಭಯವಾಗುತ್ತಿದೆ. ಜನರು ವಾಕ್​ ಬರುವುದನ್ನು ನಿಲ್ಲಿಸಿದ್ದಾರೆ. ಅಪಾರ್ಟ್​ಮೆಂಟ್​ನಲ್ಲಿ ಚಿರತೆ ಕಾಣಿಸಿಕೊಂಡ ದಿನದಿಂದ ಆತಂಕ ಶುರುವಾಗಿದೆ. ಆದಷ್ಟು ಬೇಗ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಬೇಕು” ಎಂದು ಸ್ಥಳೀಯ ನಿವಾಸಿ ಸೌಂದರ್​ ರಾಜ್​ ಮನವಿ ಮಾಡಿದರು.

ದೊಣ್ಣೆ ಹಿಡಿದು ಓಡಾಡುತ್ತಿರುವ ಜನರು: ಅಕ್ಟೋಬರ್​​ 29ರ ರಾತ್ರಿ ಬೊಮ್ಮನಹಳ್ಳಿಯ ಕೂಡ್ಲು ಭಾಗದ ಜನವಸತಿ ಪ್ರದೇಶ ಸಮೀಪದ ಕಾರಿನ ಗ್ಯಾರೇಜ್​ನಲ್ಲಿಯೂ ಚಿರತೆ ಓಡಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಭಯಕ್ಕೆ ಇಲ್ಲಿನ ಜನರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಸಂಚರಿಸುತ್ತಿದ್ದಾರೆ.

 


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ