Breaking News

ಟ್ರಂಪ್‌ಗೆಟ್ರಂಪ್‌ಗೆ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ ಸೋಲು, ಬೈಡನ್‌ಗೆ ಅಧ್ಯಕ್ಷ ಪಟ್ಟ – ಅಧಿಕೃತ ಘೋಷಣೆಯೊಂದೇ ಬಾಕಿ

Spread the love

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್‌ ಪಕ್ಷದ ಜೋ ಬೈಡನ್‌ ಜಯ ಗಳಿಸಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಬೈಡನ್‌ ಜಯಗಳಿಸುವ ಮೂಲಕ ಒಟ್ಟು 284 ಮತಗಳನ್ನು ಗೆದ್ದಿದ್ದು, ಟ್ರಂಪ್‌ 214 ಮತಗಳನ್ನು ಮಾತ್ರ ಗೆದ್ದುಕೊಂಡಿದ್ದಾರೆ. ಅಮೆರಿಕದ ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬೈಡನ್‌ 50.6% ಅಂದರೆ 7,48,47,834 ಮತ ಗಳಿಸಿದರೆ ಡೊನಾಲ್ಡ್‌ ಟ್ರಂಪ್‌ 47.7% ಅಂದರೆ 7,05,91,531 ಮತಗಳನ್ನು ಗಳಿಸಿದ್ದಾರೆ. ಅಮೆರಿಕದಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ.

ಫಲಿತಾಂಶ ತಡವಾಗುತ್ತಿರುವ ಕಾರಣ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೇಳುತ್ತಿದೆ. ಫ್ಲೋರಿಡಾದಲ್ಲಿ ಟ್ರಂಪ್ ಬೆಂಬಲಿಗರು ನಡೆಸುತ್ತಿದ್ದ ಕಾರ್ಯಕ್ರಮದಲ್ಲಿ ಕಾರಲ್ಲಿ ಬಂದ ಅಗಂತಕನೊಬ್ಬ ಮನಸೋಇಚ್ಚೆ ಗುಂಡು ಹಾರಿಸಿದ್ದು, ಇಬ್ಬರು ಮಹಿಳೆಯರಿಗೆ ಗಂಭೀರ ಗಾಯಗಳಾಗಿವೆ. ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್‌ ಶೋ”

Spread the love    ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ