Breaking News

ರೈತನ ಮೇಲೆ ಹುಲಿ ದಾಳಿ; ಗ್ರಾಮದ ಕೆಲವರಿಂದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

Spread the love

ಮೈಸೂರು: ತೊಂದರೆ ಕೊಟ್ಟು ಓಡಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿದಿಲ್ಲ ಎಂದು ಕೋಪಗೊಂಡ ನಂಜನಗೂಡು ತಾಲೂಕಿನ ಮಹಾದೇವ ನಗರದ ಕೆಲವರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದಾರೆ.

 

ಏನಿದು ಘಟನೆ?: ನಂಜನಗೂಡು ತಾಲೂಕಿನ ಮಲ್ಕುಂಡಿ ಸಮೀಪದ ಹೆಡಿಯಾಲ ಕುದುರೆಗುಂಡಿ ಹಿನ್ನೀರು ಪ್ರದೇಶದಲ್ಲಿ ರೈತರೊಬ್ಬರು ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ಮಾಡಿ ಹಸುವನ್ನು ಕೊಂದು ಹಾಕಿತ್ತು. ಹಸುವನ್ನು ರಕ್ಷಿಸಲು ಹೋಗಿದ್ದ ರೈತ ವೀರಭದ್ರ ಭೋವಿ (71) ಅವರ ಮೇಲೂ ದಾಳಿ ನಡೆಸಿ ಗಂಭೀರ ಗಾಯಗೊಳಿಸಿತ್ತು. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಸಿಬ್ಬಂದಿಗಳ ಜೊತೆ ಗ್ರಾಮದ ಕೆಲವರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಗ್ರಹಿಸಿ ಮಾತಿನ ಚಕಮಕಿ ನಡೆಸಿದ್ದಾರೆ. ಅಲ್ಲದೇ ಅರಣ್ಯ ಸಿಬ್ಬಂದಿ ಮಹಾಂತೇಶ್​ ಮೇಲೆ ಹಲ್ಲೆ ಮಾಡಿದ್ದಾರೆ.

ಕಳೆದ ವರ್ಷ ಇದೇ ಹಾದನೂರು ಒಡೆಯಪುರದ ಮಹಾದೇವ ಗೌಡ ಎಂಬುವರ ಮೇಲೆ ಹುಲಿ ದಾಳಿ ಮಾಡಿ ಅವರನ್ನು ಬಲಿ ಪಡೆದಿತ್ತು. ಅಂದಿನಿಂದಲೂ ಗ್ರಾಮಸ್ಥರು ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಆಗ್ರಹಿಸಿದ್ದರು. ಆದರೆ ಇಲ್ಲಿಯವರೆಗೂ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿದಿಲ್ಲ ಎಂಬುದೇ ಗ್ರಾಮಸ್ಥರ ದೂರಾಗಿದೆ.


Spread the love

About Laxminews 24x7

Check Also

ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್…

Spread the love ಗಣೇಶ ವಿಸರ್ಜನೆ ಮತ್ತು ಈದ್ ಮಿಲಾದ್’ನಲ್ಲಿ ಶಾಂತಿ ಕದಡಿದ್ರೇ ಹುಷಾರ್… ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ